ಪರೀಕ್ಷೆಯಲ್ಲಿ ಅಧಿಕಾರಿಗಳು ಎಚ್ಚರ ವಹಿಸಿ

22 MANJU 07
Published on

ಹೊಸಪೇಟೆ: ದ್ವಿತೀಯ ಪಿಯುಸಿ ವರ‍್ಷಿಕ ಪರೀಕ್ಷೆಗಳು ಮಾ.01 ರಿಂದ 20 ರವರೆಗೆ ನಡೆಯಲಿದ್ದು, ಯಾವುದೇ ಲೋಪವಾಗದಂತೆ ಪರೀಕ್ಷಾ ನಿಯೋಜಿತ ಅಧಿಕಾರಿಗಳು ರ‍್ತವ್ಯ ನರ‍್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ದ್ವಿತೀಯ ಪಿಯುಸಿ ಪರೀಕ್ಷಾ ಪರ‍್ವಸಿದ್ದತಾ ಸಭೆಯಲ್ಲಿ ಮಾತನಾಡಿದರು, ಜಿಲ್ಲೆಯಲ್ಲಿ ಒಟ್ಟು 23 ಪರೀಕ್ಷಾ ಕೇಂದ್ರಗಳಿದ್ದು, ಪ್ರತಿ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆಯನ್ನು ಕಡ್ಡಾಯಗೊಳಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯಸ್ಥರನ್ನು ಹೊರತುಪಡಿಸಿ ಉಳಿದಂತೆ ಎಲ್ಲರ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ತೆಗೆದುಕೊಂಡು ಹೋಗುವ ಮರ‍್ಗದಲ್ಲಿ ಪೊಲೀಸ್ ಬಿಗಿಬಂದೋಬಸ್ತ್ ನಿಯೋಜನೆ ಸೇರಿದಂತೆ ಎಲ್ಲಾ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಉತ್ತರ ಪತ್ರಿಕೆ ಪಾಲಕರು, ಕಚೇರಿ ಅಧೀಕ್ಷಕರು ಹಾಗೂ ಗೌಪ್ಯವಸ್ತುಗಳನ್ನು ಸಾಗಿಸುವ ಮರ‍್ಗಾಧಿಕಾರಿಗಳು ಎಚ್ಚರಿಕೆ ವಹಿಸುವಂತೆ ತಿಳಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಪಿಯುಸಿ ಪ್ರಶ್ನೆ ಪತ್ರಿಕೆ ಸೊರಿಕೆಯ ಬಗ್ಗೆ ಸುಳ್ಳು ಸುದ್ದಿಗಳು ಹರಡಿಸಿದರೇ ಅಂತವರ ವಿರುದ್ಧ ಕಠಿಣಕ್ರಮ ಕೈಗೊಳ್ಳಲಾಗುತ್ತದೆ. ಪರೀಕ್ಷಾ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಜೆಸ್ಕಾಂ ಅಧಿಕಾರಿಗಳು ನಿಗಾವಹಿಸಬೇಕು. ಯಾವುದೇ ಗೊಂದಲಗಳಿಲ್ಲದೇ ಪರೀಕ್ಷೆಯನ್ನು ಸುಗಮವಾಗಿ ನಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ರ‍್ತವ್ಯ ನರ‍್ವಹಿಸಬೇಕು.

ಡಿಡಿಪಿಯು ಸಿ.ನಾಗರಾಜ ಹವಾಲ್ದಾರ್ ಮಾತನಾಡಿ, ಮಾ.01 ರಿಂದ ಮಾ.20 ರವರೆಗೆ ಬೆ.10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಪರೀಕ್ಷೆ ನಡೆಯಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net