ಪರೀಕ್ಷಾ ಕೇಂದ್ರದ ಸುತ್ತ ನಿರ್ಬಂಧ

Published on

ಹೊಸಪೇಟೆ : ಈ ಸಾಲಿನ ಎಸ್‌ಎಸ್‌ಎಲ್‌ಸಿ 2 ಪರೀಕ್ಷೆ ಹಿನ್ನೆಲೆ ಕೇಂದ್ರಗಳ ಸುತ್ತಲು 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿಎಂ.ಎಸ್.ದಿವಾಕರ ಆದೇಶಿಸಿದ್ದಾರೆ.

ಜಿಲ್ಲೆಯಾದ್ಯಂತ ಮೇ.26 ರಿಂದ ಜೂ.02 ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ 2 ಪರೀಕ್ಷೆಗಳು ಸುಗಮವಾಗಿ ನಡೆಯುವ ನಿಟ್ಟಿನಲ್ಲಿ 23 ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಜೆರಾಕ್ಸ್, ಸೈಬರ್ ಸೆಂಟರ್‌ಗಳನ್ನು ಮುಚ್ಚಲು ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರು ಅನಿವಾರ್ಯ ಸಂದರ್ಭಗಳಲ್ಲಿ ಸಂವಹನಕ್ಕಾಗಿ ಬೇಸಿಕ್ ಮೊಬೈಲ್ ಪೋನ್ ಬಳಸಲು ಮಾತ್ರ ಅನುಮತಿ ನೀಡಲಾಗಿದೆ. ನಿಯೋಜನೆಗೊಂಡಿರುವ ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಪೋನ್‌ನನ್ನು ನಿಷೇಧಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net