ನಕಲಿ ವೈದ್ಯರ ಕಡಿವಾಣ ಹಾಕಿ

27 MANJU 06
Published on

ಹೊಸಪೇಟೆ: ಜಿಲ್ಲೆಯಾದ್ಯಂತ ಕೆಪಿಎಂಇ ಕಾಯ್ದೆಯಡಿ ನೋಂದಾಣಿ ಆಗದ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್‌ಗಳನ್ನು ನಕಲಿ ಎಂದು ಪರಿಗಣಿಸಿ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ತಾಯಿ ಮತ್ತು ಶಿಶು ಮರಣ ಪರಿಶೀಲನೆ ಸಭೆ ಹಾಗೂ ರಾಷ್ಟಿçÃಯ ಕಾರ್ಯಕ್ರಮಗಳ ಅಂತರ್ ಇಲಾಖೆ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್‌ಗಳು ಕೆಪಿಎಂಇ ಕಾಯ್ದೆಯಡಿ ನೋಂದಾಣಿಯಾಗಿರಬೇಕು. ಸಾರ್ವಜನಿಕ ಮತ್ತು ಆರೋಗ್ಯ ಸೇವೆಯಲ್ಲಿ ನಿರತರಾದ ವೈದ್ಯರು ಕಡ್ಡಾಯವಾಗಿ ಕೆಪಿಎಂಇ ಅಡಿ ನೋಂದಾಯಿಸಿ ಸೇವೆಗೆ ಮುಂದಾಗಬೇಕು. ಇಲ್ಲದಿದ್ದಲ್ಲಿ ಅಂತಹ ಆಸ್ಪತ್ರೆಗಳು, ಕ್ಲಿನಿಕ್ ಮತ್ತು ವೈದ್ಯರನ್ನು ನಕಲಿ ಎಂದು ಪರಿಗಣಿಸಬೇಕು. ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ತಡೆಯಲು ತಂಡಗಳನ್ನು ರಚಿಸಿ ಕಾನೂನು ರೀತಿಯ ಕ್ರಮ ವಹಿಸಬೇಕು. ಯಾವುದೇ ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳಲ್ಲಿ ಹೆಣ್ಣು ಭ್ರೂಣಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ಕುರಿತು ಮಾಹಿತಿ ನೀಡಿ ಯಶಸ್ವಿಗೊಂಡ ಗುಪ್ತ ಕಾರ್ಯಾಚಾರಣೆಯ ಮಾಹಿತಿದಾರರಿಗೆ ಒಂದು ಲಕ್ಷ ರೂ, ಗಳ ಬಹುಮಾನ ವಿತರಿಸಲು ಕ್ರಮ ವಹಿಸಬೇಕು. ಹಾಗೂ ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿಡಬೇಕು. ಸಂಬAಧಿಕರು ಅಥವಾ ದಲ್ಲಾಳಿಗಳು ಭ್ರೂಣ ಲಿಂಗ ಪತ್ತೆಗೆ ಒತ್ತಾಯಿಸಿದಲ್ಲಿ ಮೊದಲ ಅಪರಾಧಕ್ಕೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಜತೆಗೆ 50 ಸಾವಿರ ರೂ. ಗಳ ವರೆಗೆ ದಂಡ ವಿಧಿಸಬೇಕು. ನಂತರದ ಅಪರಾಧಕ್ಕೆ 5 ವರ್ಷಗಳ ವರೆಗೆ ಜೈಲು ಶಿಕ್ಷೆ ಜತೆಗೆ ಒಂದು ಲಕ್ಷ ರೂ. ವರೆಗೆ ದಂಡ ವಿಧಿಸಲಾಗುವುದು ಎಂದರು.

ಜಿಪಂ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ಡಿಎಚ್‌ಒ ಡಾ.ಎಲ್.ಆರ್.ಶಂಕರನಾಯ್ಕ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ ನಾಯ್ಕ, ವೈದ್ಯಾಧಿಕಾರಿಗಳಾದ ಡಾ.ಹರಿಪ್ರಸಾದ್, ಡಾ.ಭಾಸ್ಕರ್, ಡಾ.ರಾಧಿಕಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net