ರೈತರಿಂದ ಅರ್ಜಿ ಅಹ್ವಾನ

Published on

ಹೊಸಪೇಟೆ: ತಾಲೂಕಿನ ಗಣಿಭಾದಿತ 33 ಗ್ರಾಮಗಳಲ್ಲಿ ಸಮಗ್ರ ಗಣಿ ಪರಿಸರ ಪುನಶ್ಚೇತನ ಯೋಜನೆಯಡಿ (ಸಿಇಪಿಎಂಐಜೆಡ್) ತೋಟಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ರೈತರಿಂದ ಅರ್ಜಿ ಅಹ್ವಾನಿಸಿದೆ.

ಹೆಚ್ಚಿನ ಮಾಹಿತಿಗಾಗಿ ರೈತರು ಹೋಬಳಿಯ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಸಹಾಯಕ ತೋಟಗಾರಿಕೆ ಅಧಿಕಾರಿ, ರೈತ ಸಂಪರ್ಕ ಕೇಂದ್ರ ಹೊಸಪೇಟೆ, ಮರಿಯಮ್ಮನಹಳ್ಳಿ, ಕಮಲಾಪುರ, ಸೇರಿದಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಹೊಸಪೇಟೆ ಇಲ್ಲಿ ಸಂಪರ್ಕಿಸಲು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net