ರೈತರ ಬೇಡಿಕೆ ಈಡೇರಲಿ

15 MANJU 05
Published on

ಹೊಸಪೇಟೆ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯಿAದ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.

ವಿಜಯನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸಕ್ಕರೆ ಕಾರ್ಖಾನೆ ಪ್ರಾಂಭಿಸಬೇಕು. ಪಿ.ಕೆ.ಹಳ್ಳಿ ಏತಾನೀರಾವರಿ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯಯುತ ಪರಿಹಾರ ನೀಡಬೇಕು. ಬಗರ್ ಹುಕುಂ ಸಾಗುವಳಿ ಭೂಮಿಗಳ ಅರಣ್ಯ ಇಂಡೀಕರಣ ರದ್ದುಪಡಿಸಬೇಕು. ದೌರ್ಜನ್ಯ ಹಿಂಸೆ ಮೂಲಕ ಒಕ್ಕಲೆಬ್ಬಿಸಿರುವ ಎಲ್ಲಾ ರೈತರಿಗೆ ಸ್ವಾಧೀನ ವಾಪಸ್ಸು ನೀಡಬೇಕು. ಅರಣ್ಯ ಇಂಡೀಕರಣದಿAದ ನೀಡಿದ ನೋಟೀಸ್ ನೀಡುವುದು ನಿಲ್ಲಬೇಕು ಎಂದು ಆಗ್ರಹಿಸಿದರು.

ಕಾನೂನು ಬಾಹಿರವಾಗಿ ಅಸ್ತಿತ್ವಕ್ಕೆ ಬಂದಿರುವ ಬೆಳಗಾವಿ ಖಾಸಗಿ ಕೃಷಿ ಮಾರುಕಟ್ಟೆ ಮುಚ್ಚಬೇಕು. ಪಂಪಸೆಟ್‌ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಬಾರದು. ವಿದ್ಯುತ್ ಖಾಸಗೀಕರಣ ಪ್ರಯತ್ನ ಕೂಡಲೇ ನಿಲ್ಲಿಸಬೇಕು. ಚನ್ನರಾಯಪಟ್ಟಣ ಕೆ.ಐ.ಎ.ಡಿ.ಬಿ.ಯ ಬಲವಂತ ಹಾಗೂ ಅನ್ಯಾಯದ ಭೂಸ್ವಾಧೀನ ರದ್ದುಪಡಿಸಬೇಕು. ರೈತರ ಉತ್ಪನ್ನಗಳ ಬೆಲೆ ಕುಸಿತದ ಸಂದರ್ಭದಲ್ಲಿ ಮಾರುಕಟ್ಟೆ ಮಧ್ಯಪ್ರವೇಶಕ್ಕಾಗಿ ಕನಿಷ್ಠ 10 ಸಾವಿರ ಕೋಟಿ ರೂ.ಗಳ ಅವರ್ತ ನಿಧಿ ಸ್ಥಾಪಿಸಬೇಕು. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸಮರ್ಪಕವಾಗಿ ಜಾರಿಯಾಗಬೇಕು. ಕೃಷಿ ಕೂಲಿಕಾರರ ರಕ್ಷಣೆಯ ಕಲ್ಯಾಣ ಮಂಡಳಿ ಅಸ್ತಿತ್ವಕ್ಕೆ ತರಬೇಕು. ಬಗರ್ ಹುಕುಂ ರೈತರ ಮೇಲೆ ಗೊಂಡಾವರ್ತನೆ ತೋರಿರುವ ಗುಬ್ಬಿ ಕಾಂಗ್ರೆಸ್ ಶಾಸಕರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು. ಹಿಂದೆ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಕರಾಳ ಕೃಷಿ ಕಾಯ್ದೆಗಳು ಭೂ ಸ್ವಾಧೀನ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರಮುಖರಾದ ಎನ್.ಯಲ್ಲಲಿಂಗ, ಎನ್.ಗೋಪಾಲ್, ಆರ್.ಭಾಸ್ಕರ್ ರೆಡಿ, ಬಿಸಾಟಿ ತಾಯಪ್ಪ, ಕಲ್ಯಾಣಯ್ಯ, ಜಿ.ಕರೆಹನುಮಂತ, ಅಂಜಿನಿ, ನಿಜಲಿಂಗಪ್ಪ, ಗಾಳೆಪ್ಪ, ದುರುಗೇಶ್, ರಾಮು, ನಿಂಗಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net