

ಹೊಸಪೇಟೆ: ವಕ್ಫ್ ಮಂಡಳಿ ಅವಾಂತರ ವಿರುದ್ಧ ಸಿಡಿದ್ದೆದಿರುವ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ನಗರದಲ್ಲಿ ಮಂಗಳವಾರ ಸಚಿವ ಜಮೀರ್ ಭಾವಚಿತ್ರ ದಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಗರದ ಗಾಂಧಿಚೌಕ್‌ನಿಂದ ಆರಂಭವಾದ ಮೆರವಣಿಗೆ ಸಂಗೋಳ್ಳಿರಾಯಣ್ಣ ವೃತ್ತ, ಪುಣ್ಯಮೂರ್ತಿ ವೃತ್ತ, ಕೇಂದ್ರ ಬಸ್‌ನಿಲ್ದಾಣ, ಪುನೀತ್ ರಾಜಕುಮಾರ್ ವೃತ್ತದ ಮಾರ್ಗವಾಗಿ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ನಂತರ ಉಪತಹಸೀಲ್ದಾರ್ ವೆಂಕಟೇಶ್ ಆಶ್ರೀತ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ರವಾನಿಸಿದರು.
ರಾಜ್ಯದಲ್ಲಿ ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ರೈತರ ಜಮೀನಿನ ಪಹಣಿ ಹಕ್ಕುಗಳ ಕಾಲಂ ನಂ.9 ಮತ್ತು 11ರಲ್ಲಿ ವಕ್ಫ್ ಆಸ್ತಿ ಬಗ್ಗೆ ವಿಚಾರಣೆ ಹಂತದಲ್ಲಿದೆ ಎಂದು ಮತ್ತು ವಕ್ಫ್ ಆಸ್ತಿ ಎಂದು ನಮೂದಾಗಿದೆ. ತಲತಲಾಂತರದಿಂದ ರೈತರು ಜಮೀನುಗಳಲ್ಲಿ ಉಳಿಮೆ ಮಾಡಿಕೊಂಡು ಬಂದಿರುತ್ತಾರೆ. ಹಾಗೇಯೇ ಕೆಲ ರೈತರು ಜಮೀನು ಖರೀದಿ ಮಾಡಿ ಉಳಿಮೆ ಮಾಡುತ್ತಿದ್ದಾರೆ. ಈಗಾಗಲೇ ಕೊಟ್ಟೂರು ಭಾಗದಲ್ಲಿ ಕೆಲ ರೈತರಿಗೆ ಯಾವುದೇ ಮುನ್ಸೂಚನೆ ನೀಡದೇ ಏಕಾಏಕಿಯಾಗಿ ನೋಟಿಸ್‌ಗಳನ್ನು ಜಾರಿ ಮಾಡಿದ್ದಾರೆ. ಕೆಲ ಭಾಗದ ರೈತರಿಗೆ ಕೂಡ ನೋಟಿಸ್‌ಗಳನ್ನು ನೀಡಿ, ಸಂಬಂಧಪಟ್ಟ ಅಧಿಕಾರಿಗಳು ದೌರ್ಜನ್ಯದಿಂದ ಇದರ ಬಗ್ಗೆ ಯಾರಿಗೂ ಹೇಳದಂತೆ ಒತ್ತಡ ಹಾಕುತ್ತಿದ್ದಾರೆ. ಇದರಿಂದ ರೈತರು ಮಾತನಾಡುತ್ತಿಲ್ಲ ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಸುಮಾರು ರೈತರಿಗೆ ಕಾಲಂ 9 ಮತ್ತು 11ರಲ್ಲಿ ವಕ್ಪ್ ಆಸ್ತಿ ಎಂದು ನಮೂದಾಗಿರುತ್ತದೆ. ಈ ಕೂಡಲೇ ಈ ನಿಧಾಧರ ವಾಪಸ್ ಪಡೆಯಬೇಕು ಈ ವ್ಯವಸ್ಥೆಯು ಕಾಂಗ್ರೆಸ್ ಸರ್ಕಾರದ ಹಿಟ್ಲರ್ ಆಡಳಿತವಾಗಿದೆ. ಸಚಿವ ಜಮೀರನ್ನುಸಚಿವ ಸಂಪುಟದಿಂದ ವಜಾ ಮಾಡಬೇಕು. ಇಲ್ಲವಾದಲ್ಲಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯಿಂದ ಕಪ್ಪು ಭಾವುಟ ಪ್ರದರ್ಶನ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಡಿದರು.
ಜಿಲ್ಲಾಧ್ಯಕ್ಷ ಟಿ.ನಾಗರಾಜ್, ಪ್ರಮುಖರಾದ ಸಣ್ಣಕ್ಕಿ ರುದ್ರಪ್ಪ, ಮೆಟ್ರಿ ಜಡೆಪ್ಪ, ಆರ್.ಆರ್.ತಾಯಪ್ಪ, ವಿ.ಗಾಳೆಪ್ಪ, ರಾಮಾಂಜಿನಿ, ಸತೀಶ, ನಾಗೇಶ, ಜೆ.ಜಿ.ವಿರುಪಾಕ್ಷಿ, ಎಲ್.ನಾಗೇಶ್, ಕೆ.ಸುರೇಶ, ಮನಸಾಲಿ ರಾಘವೇಂದ್ರ, ಸಾಗರ್, ಮೂರ್ತಿ, ಬಾಬು ಇತರರಿದ್ದರು.