ಹೊಸಪೇಟೆ ಅಗ್ನಿಶಾಮಕ ಠಾಣೆಯ ಪ್ರಮುಖ ಎರಿಸ್ವಾಮಿಗೆ ಸಿಎಂ ಚಿನ್ನದ ಪದಕ

Hosapete Eriswami CM Gold Medal
ಎರಿಸ್ವಾಮಿ
Published on

ಹೊಸಪೇಟೆ: ನಗರದ ಅಗ್ನಿಶಾಮಕ ಠಾಣೆಯ ಪ್ರಮುಖ ಅಗ್ನಿಶಾಮಕ ಜಿ.ಎರಿಸ್ವಾಮಿಗೆ ಮುಖ್ಯಮಂತ್ರಿ ಚಿನ್ನದ ಪದಕ ಲಭಿಸಿದೆ.

ಅಗ್ನಿಶಮನ, ರಕ್ಷಣಾ ಕಾರ್ಯ ಹಾಗೂ ಇತರ ವಿಪತ್ತು ಸಂದರ್ಭಗಳಲ್ಲಿ ಸೇವೆ ಸಲ್ಲಿಸಿರುವ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿ, ಸಿಬ್ಬಂದಿಗೆ ನೀಡುವ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಎರಿಸ್ವಾಮಿ ಆಯ್ಕೆಯಾಗಿದ್ದಾರೆ. ಇವರೊಂದಿಗೆ ರಾಜ್ಯದ 25 ಜನರಿಗೆ ಪದಕ ಲಭಿಸಿದೆ. ಎರಿಸ್ವಾಮಿ ರಾಣೆಬೆನ್ನೂರು, ಸಿರಗುಪ್ಪ, ಸಂಡೂರು ಹಾಗೂ ಬಳ್ಳಾರಿಯಲ್ಲಿ ಸೇವೆ ಸಲ್ಲಿಸಿದ್ದು, ಸದ್ಯ ಹೊಸಪೇಟೆ ಅಗ್ನಿಶಾಮಕ ಠಾಣೆಯಲ್ಲಿ ಅಗ್ನಿಶಾಮಕ ಪ್ರಮುಖರಾಗಿ 8 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಎರಿಸ್ವಾಮಿ ಸಾಧನೆಗೆ ಹೊಸಪೇಟೆ ಅಗ್ನಿಶಾಮಕ ಠಾಣಾಧಿಕಾರಿ ಕೃಷ್ಣಸಿಂಗ್ ಮತ್ತು ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net