ಮುಂದುವರೆಗೆದ ತುಂಗಭದ್ರಾ ಪ್ರವಾಹ

news
ತುಂಗಭದ್ರಾ ಜಲಾಶಯದಿಂದ ನದಿಗೆ ಭಾರೀ ಪ್ರಮಾಣದ ನೀರು ಹರಿಸಿದ ಹಿನ್ನೆಲೆಯಲ್ಲಿ ಹಂಪಿ ಕೊದಂಡರಾಮಸ್ವಾಮಿ ದೇಗುಲದ ಆವರಣ ಹಾಗೂ ಸಾಲು ಮಂಪಟಗಳು ಜಲಾವೃತವಾಗಿರುವುದು.
Published on

ಹೊಸಪೇಟೆ : ತುಂಗಭದ್ರಾ ಜಲಾಶಯದ ಒಳ ಹರಿವು ತಗ್ಗದ್ದರಿಂದ ಸೋಮವಾರ ಕೂಡ 33 ಗೇಟ್‌ಗಳನ್ನು ತೆರೆದು ನದಿಗೆ 1.ಲಕ್ಷ ಕ್ಯುಸೆಕ್ ಅಧಿಕ ನೀರು ನದಿಗೆ ಹರಿಸಲಾಗಿದೆ. ಈಗಾಗಲೇ ಹಂಪಿಯ ಪುರಂದರದಾಸರ ಮಂಟಪ ಸೇರಿದಂತೆ ಇತರೆ ಮಂಟಪಗಳು ಸಂಪೂರ್ಣ ಮುಳುಗಡೆಯಾಗಿವೆ.

ರಘುನಂದನ ತೀರ್ಥರ ಬೃಂದಾವನ, ಸುಗ್ರೀವ ಗುಹೆ, ಸೀತೆ ಸೆರಗು, ವಿಷ್ಣುವಿನ ದಶಾವತಾರ ಉಬ್ಬು ಶಿಲ್ಪಗಳು, ಕೋಟಿಲಿಂಗ ಜಲಾವೃತವಾಗಿವೆ. ಧಾರ್ಮಿಕ ವಿಧಿವಿಧಾನ ನೆರವೇರಿಸುವ ಮಂಟಪ, ಸ್ನಾನಘಟ್ಟ, ವಿಷ್ಣು ಮಂಟಪ, ತುಂಗಾರತಿ ಸ್ಥಳ, ಕಾಲು ಸೇತುವೆ, ಜನಿವಾರ ಮಂಟಪಗಳು ಸಂಪೂರ್ಣ ಮುಳುಗಡೆಯಾಗಿವೆ. ಕೋದಂಡರಾಮಸ್ವಾಮಿ ದೇವಾಲಯದ ಬಳಿಯ ಮಂಟಪಗಳು ಕೂಡ ಜಲಾವೃತವಾಗಿವೆ.

ಹಂಪಿಯ ಚಕ್ರತೀರ್ಥದ ಬಳಿ ಭಾರೀ ಪ್ರಮಾಣದಲ್ಲಿ ನೀರು ನದಿಯಲ್ಲಿ ಹರಿಯುತ್ತಿದೆ. ಈಗಾಗಲೇ ಹರಿಗೋಲು ಹಾಗೂ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ. ಹಂಪಿ ತುಂಗಭದ್ರಾ ನದಿ ತೀರದಲ್ಲಿ ಭದ್ರತೆಗೆ ಪೊಲೀಸರನ್ನು ಕೂಡ ನಿಯೋಜನೆ ಮಾಡಲಾಗಿದೆ.

ಜಲಾಶಯದ ಒಳ ಹರಿವು 1.56 ಲಕ್ಷ ಕ್ಯುಸೆಕ್ ಇದ್ದು, ಇನ್ನೂ ಏರುತ್ತಲೇ ಸಾಗುತ್ತಿದೆ. ಹಾಗಾಗಿ ಜಲಾಶಯದಿಂದ ಭಾರೀ ಪ್ರಮಾಣದ ನೀರು ನದಿಗೆ ಹರಿಸಲಾಗುತ್ತಿದೆ. ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳ ಜಿಲ್ಲಾಡಳಿತಗಳಿಗೆ ತುಂಗಭದ್ರಾ ಮಂಡಳಿ ಎಚ್ಚರಿಕೆ ಸಂದೇಶ ರವಾನಿಸಿದೆ. ಇನ್ನು ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗೂ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ. ನದಿಪಾತ್ರದ ಜನರು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಈಗಾಗಲೇ ಆಯಾ ಜಿಲ್ಲಾಡಳಿತಗಳು ಕ್ರಮವಹಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net