ಗಾಳೆಮ್ಮದೇವಿ ಅದ್ದೂರಿ ರಥೋತ್ಸವ

12 MANJU 03
Published on
ಹೊಸಪೇಟೆ: ತಾಲೂಕಿನ ಹಂಪಿ ರಸ್ತೆಯ ಗಾಳೆಮ್ಮದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಬುಧವಾರವಸಂಜೆ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು.
ಜಾತ್ರಾ ಮಹೋತ್ಸವ ನಿಮಿತ್ತ ಬೆಳಿಗ್ಗೆಯಿಂದಲೇ ತ ವಿಶೇಷ ಪೂಜೆ ಕಾರ್ಯಕ್ರಮ ನಡೆದವು. ಭಕ್ತರು ದೇವರಿಗೆ ಕಾಯಿ ನೈವೇದ್ಯ ಸಲ್ಲಿಸಿ ದರ್ಶನ ಪಡೆದರು.  ಸಂಜೆಯಾಗುತ್ತಿದ್ದಂತೆ ಭಕ್ತರ ದಂಡು ದೇಗುಲದ ಆವರಣದತ್ತ ಆಗಮಿಸಿತು. ರಥೋತ್ಸವಕ್ಕೂ ಮೊದಲು ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ರಥೋತ್ಸವಕ್ಕೆ ಚಾಲನೆ ಸಿಗುತ್ತಿದ್ದಂತೆ, ಭಕ್ತರು ರಥೋತ್ಸವಕ್ಕೆ ಉತ್ತುತ್ತಿ ಹಾಗೂ ಬಾಳೆಹಣ್ಣು ಸಮರ್ಪಿಸಿ ಭಕ್ತಿ ಹರಕೆ ತೀರಿಸಿದರು. ರಥೋತ್ಸವದ ಮುಂದೆ ಡೊಳ್ಳಿನ ಮೇಳ ಹಾಗೂ ವಿವಿಧ ವಾದ್ಯ ಮೇಳಗಳು ಗಮನ ಸೆಳೆದವು.ರಥೋತ್ಸವವು ತುಂಗಭದ್ರಾ ಕಾಲೂವೆ ವರೆಗೆ ತಲುಪಿ ನಂತರ ವಾಪಸಾಯಿತು. ರಥೋತ್ಸವ ಯಶಸ್ವಿಯಾಗಿ ಮರಳಿ ಸ್ಥಳಕ್ಕೆ ಬಂದು ನಿಂತಾಗ ಭಕ್ತರು ಚಪ್ಪಾಳೆ ತಟ್ಟಿ ಹರ್ಷವನ್ನು ವ್ಯಕ್ತಪಡಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net