

ಹೊಸಪೇಟೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಇತರೆ ಇಲಾಖೆಯಿಂದ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ಮಹಾತ್ಮ ಗಾಂಧೀಜಿ 155ನೇ ಜಯಂತಿ ಅಂಗವಾಗಿ ವಿಶೇಷ ಕಾರ್ಯಕ್ರಮ ನಡೆದವು.
ಬಾಲಕೀಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ.ದಯಾನಂದ ಕಿನ್ನಾಳ್ ವಿಶೇಷ ಉಪನ್ಯಾಸಕದಲ್ಲಿ ಮಾತನಾಡಿ, ಮಹಾತ್ಮ ಗಾಂಧೀಜಿಯವರು ಸ್ವಾತಂತ್ರö್ಯ ಹೋರಾಟದಲ್ಲಿ ಮುಂದಾಳತ್ವ ವಹಿಸಿ ಸಕ್ರಿಯವಾಗಿ ಭಾಗಿಯಾದವರು. ಎಲ್ಲ ಧರ್ಮಿಯರನ್ನು ಒಗ್ಗೂಡಿಸಿ ಹೋರಾಟ ಮಾಡಿ ಭಾರತೀಯರಾದ ನಾವೆಲ್ಲರೂ ಒಂದು ಎನ್ನುವ ಸಂದೇಶ ರವಾನಿಸಿದರು. ಆಹಿಂಸೆ ತತ್ವದಲ್ಲಿ ಬಲವಾಗಿ ನಂಬಿಕೆ ಹೊದಿದ್ದವರು. ಮಹಾತ್ಮ ಗಾಂಧೀಜಿಯವರ ಜಯಂತ್ಯುತ್ಸ ರಾಷ್ಟçದಲ್ಲಿ ಹಬ್ಬದಂತೆ ಆಚರಿಸುವುದೇ ಗಾಂಧೀಜಿಯವರ ವ್ಯಕ್ತಿತ್ವವು ಹಿರಿದು ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಉದ್ಘಾಟಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಯಾಕ ನಿರ್ದೇಶಕ ಗವಿಸಿದ್ದಪ್ಪ ಹೊಸಮನಿ ಪ್ರಸ್ತಾವಿಕ ಮಾತನಾಡಿದರು. ಬಾಪೂಜಿ ಪ್ರಬಂಧ ಸ್ಪರ್ಧೆ ವಿಚೇತರಿಗೆ ಸನ್ಮಾನಿಸಲಾಯಿತು. ಗಾಂಧಿಪ್ರಿಯ ಭಜನೆಗಳ ಗಾಯನ, ಸರ್ವಧರ್ಮ ಪ್ರಾರ್ಥನೆ ಮತ್ತು ವಿಶೇಷ ಉಪನ್ಯಾಸ ಮತ್ತು ಖಾದಿ ವಸ್ತುಗಳ ಪ್ರದರ್ಶನ ಮಾಡಲಾಯಿತು. ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಹುಡಾ ಅಧ್ಯಕ್ಷ ಎಚ್.ಎನ್.ಎಫ್.ಇಮಾಮ್ ನಿಯಾಜಿ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಜಿ.ಪಂ. ನೋಂಗ್ಜಾಯ್ ಮೊಹಮದ್ ಅಲಿ ಅಕ್ರಮ್ ಶಾ, ಎಸ್ಪಿ ಬಿ.ಎಲ್.ಶ್ರೀಹರಿ ಬಾಬು, ಎಸಿ ವಿವೇಕನಂದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಸ್.ಮಂಜುನಾಥ, ತಹಸೀಲ್ದಾರ್ ಶೃತಿ ಎಂ.ಮಳ್ಳಗೌಡ್ರ ಇತರರಿದ್ದರು.