ಜಿಲ್ಲಾಧ್ಯಾಂತ ಗಾಂಧೀಜಿ, ಶಾಸ್ತ್ರಿಜೀ ಸ್ಮರಣೆ

02 MANJU 03
Published on

ಹೊಸಪೇಟೆ: ನಗರ ಸೇರಿದಂತೆ ಜಿಲ್ಲಾದ್ಯಂತ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಆಯಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ಈ ಇಬ್ಬರೂ ಮಹನೀಯರಿಗೆ ಪುಷ್ಪಾರ್ಚನೆ ಸಲ್ಲಿಸಿ, ಸ್ಮರಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ನಡೆದ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ನಮನ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಮಾತನಾಡಿ, ಸತ್ಯ, ಅಹಿಂಸೆ, ಶಾಂತಿ, ಸ್ವಚ್ಛತೆ ಸಂದೇಶದ ಪ್ರತಿಪಾದಕ ಮಹಾತ್ಮ ಗಾಂಧೀಜಿ ಸಂದೇಶ ಸಾರ್ವಕಾಲಿಕವಾಗಿದೆ. ದೇಶದಕ್ಕಾಗಿ ಸ್ವಾತಂತ್ರö್ಯಕ್ಕಾಗಿ ಹೋರಾಡಿದ ಮಹಾನ್ ನಾಯಕ. ಅವರು ನೀಡಿದ ಮಾರ್ಗದರ್ಶನ ನಡೆದರೆ ಸದೃಢ ರಾಷ್ಟçಕ್ಕಾಗಿ ಶ್ರಮಿಸೋಣ. ಹಾಗೂ ಜೈ ಜವಾನ್ ಜೈ ಕಿಸಾನ್ ಎಂದು ಹೇಳಿದ ಮಹಾನ್ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು. ರೈತರಿಗೆ ಹಾಗೂ ಸೈನಿಕರಿಗೆ ಗೌರವ ನೀಡೋಣ. ಇಬ್ಬರು ಮಹಾನೀಯರ ತತ್ವಾದರ್ಶ ಪಾಲಿಸೋಣ ಎಂದರು.

ಜಯAತಿ ಹಿನ್ನೆಲೆಯಲ್ಲಿ ನಗರಸಭೆ, ನಗರಾಭಿವೃದ್ಧಿ ಕೋಶದ ಸಹಯೋಗದಲ್ಲಿ ಸ್ವಚ್ಛತಾ ನಡಿಗೆ ಕಾರ್ಯಕ್ರಮ ನಡೆಯಿತು. ಸ್ವಚ್ಛತಾ ಪ್ರತಿಜ್ಞೆಯನ್ನು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್ ಬೋಧಿಸಿದರು. ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿ.ಪಂ. ಸಿಇಒ ನೋಂಗ್ಜಾಯ್ ಮಹಮ್ಮದ್ ಅಲಿ ಅಕ್ರಂ ಶಾ ಹಾಗೂ ಎಸ್ಪಿ ಬಿ.ಎಲ್.ಶ್ರೀಹರಿಬಾಬು ಶ್ರಮದಾನದಲ್ಲಿ ಭಾಗಿಯಾದರು. ಸ್ವಚ್ಛತಾ ಪ್ರತಿಜ್ಞೆಯನ್ನು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್ ಬೋಧಿಸಿದರು.

ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಉಪವಿಭಾಗಿಯಾಧಿಕಾರಿ ಪಿ.ವಿವೇಕಾನಂದ, ಜಿ.ಪಂ. ಉಪ ಕಾರ್ಯದರ್ಶಿ ಭೀಮಪ್ಪ ಲಾಳಿ, ನಗರಸಭೆಯ ಪೌರಾಯುಕ್ತ ಸಿ.ಚಂದ್ರಪ್ಪ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಚ್.ಎಸ್.ಮಂಜುನಾಥ, ತಹಸೀಲ್ದಾರ್ ಶೃತಿ ಎಂ.ಮಳ್ಳನಗೌಡ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ಕೆ.ರಂಗಣ್ಣನವರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net