ಅಡುಗೆ ಸಿಲಿಂಡರ್ ಅವಘಡ ಎಚ್ಚರಿಕೆ ವಹಿಸಿ

21 MANJU 03
Published on

ಹೊಸಪೇಟೆ: ಜಿಲ್ಲೆಯಲ್ಲಿ ಅಡುಗೆ ಸಿಲಿಂಡರ್‌ನ ಸುರಕ್ಷತಾ ಮಾನದಂಡಗಳನ್ನು ಸಾರ್ವನಿಕರಿಗೆ ತಿಳಿಸುವ ಮೂಲಕ ಯಾವುದೇ ರೀತಿಯ ಅವಘಡ ಸಂಭವಿಸದಂತೆ ಮುಂಜಾಗ್ರತೆ ಕ್ರಮಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಅಡುಗೆ ಸಿಲಿಂಡರ್ ವಿತರಣೆ, ಸಾಗಾಣಿಕೆ ಮತ್ತು ಸಂಗ್ರಹಣೆ ಮಾಡುವ ಗ್ಯಾಸ್ ಏಜೆನ್ಸಿಗಳ ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಡುಗೆ ಸಿಲೆಂಡರ್ ಗೃಹ ಬಳಕೆದಾರರು ಅತ್ಯಂತ ತುರ್ತು ಸಮಯದಲ್ಲಿ 1906 ಟೋಲ್ ಫ್ರೀ ಸಂಖ್ಯೆಯನ್ನು ಬಳಕೆ ಮಾಡಿ. ಸರ್ಕಾರ ನಿಗಧಿಪಡಿಸಿದ ದರಕ್ಕಿಂತ ಗೃಹಬಳಕೆ ಅನಿಲ ಗ್ರಾಹಕರಿಂದ ಹೆಚ್ಚುರಿಯಾಗಿ ಹಣವನ್ನು ವಸೂಲಿ ಮಾಡಬಾರದು. ಗ್ರಾಹಕರಿಂದ ಯಾವುದೇ ದೂರುಗಳು ಬಂದ ತಕ್ಷಣ ಕೂಡಲೇ ಸ್ಥಳಕ್ಕೆ ತೆರಳಿ ಸಮಸ್ಯೆಯನ್ನು ಬಗೆಹರಿಸಬೇಕು. ಇತ್ತೀಚಿಗೆ ಗಾದಿಗನೂರು ಗ್ರಾಮದಲ್ಲಿ ಜರುಗಿದ ಗ್ಯಾಸ್ ಸಿಲೆಂಡರ್ ಅವಘಡಗಳಂತಹ ಘಟಣೆ ಮತ್ತೊಮ್ಮೆ ಜರುಗದಂತೆ ಎಲ್ಲಾ ಗ್ಯಾಸ್ ಏಜೆನ್ಸಿಗಳು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು ಹಾಗೂ ಈ ಬಗ್ಗೆ ಸಿಲಿಂಡರ್ ಬಳಕೆದಾರರಿಗೆ ಸಹ ಜಾಗೃತಿಯನ್ನು ಮೂಡಿಸಬೇಕು. ಇಂತಹ ಘಟನೆಗಳು ಮತ್ತೊಮ್ಮೆ ಜರುಗಿದಲ್ಲಿ ಸಂಭಂಧಿಸಿದ ಏಜೆನ್ಸಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿದರು.

ಆಹಾರ ಮತ್ತು ನಾಗಾರೀಕರ ಸರಬಾಜು ಇಲಾಖೆಯ ಉಪನಿರ್ದೇಶಕ ರಿಯಾಜ್ ಮಾತನಾಡಿ, ಗೃಹ ಸಿಲೆಂಡರ್ ಬಳಕೆದಾರರು ಸಿಲಿಂಡರ್ ನಿಂದ ಗ್ಯಾಸ್ ಸ್ಟವ್ ಗೆ ಹೋಗುವಂತಹ ಪೈಪ್ ಮತ್ತು ಅದರ ಕವಾಡುಗಳಲ್ಲಿ ತೊಂದರೆ ಕಾಣಿಸಬಹುದು. ಸಣ್ಣದೊಂದು ಸೋತಿಕೆ ಇದ್ದರೂ, ಪ್ರಾಣಕ್ಕೆ ಹಾನಿ ಆಗಬಹುದು. ಸರಿಯಾದ ರೀತಿಯಲ್ಲಿ ಗ್ಯಾಸ್ ಸಿಲಿಂಡರ್ ಸುರಕ್ಷಿತವಾಗಿ ಬೀಳದಂತೆ ಇಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net