ಆದಿವಾಸಿಗಳ ಆಶಾ ಕಿರಣ ಬಿರ್ಸಾ ಮುಂಡಾ

15 MANJU 03
Published on

ಹೊಸಪೇಟೆ: ರಾಷ್ಟ್ರದ ಸ್ವಾತಂತ್ರ‍್ಯಕ್ಕಾಗಿ ಹಾಗೂ ಬುಡಕಟ್ಟು ಜನಾಂಗದವರ ಏಳಿಗೆಗಾಗಿ ಹೋರಾಡಿದ ಧೀಮಂತ ವ್ಯಕ್ತಿ ಭಗವಾನ್ ಬಿರ್ಸಾ ಮುಂಡಾ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಹೇಳಿದರು.

ನಗರದ ಒಳಾಂಗಣ ಕ್ರೀಡಾಂಗಣದ ಸಭಾಂಗಣದಲ್ಲಿ ಶುಕ್ರವಾರ ನಡೆದ ಜನಜಾತಿಯ ಗೌರವ್ ದಿವಾಸ್ ಆಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಆದಿವಾಸಿ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮ ದಿನಾಚರಣೆ ಅಂಗವಾಗಿ ಜನಜಾತಿಯ ಗೌರವ್ ದಿವಸ್ ಎಂದು ಪ್ರತಿ ವರ್ಷ ನ.15 ರಂದು ಆಚರಿಸಲಾಗುತ್ತದೆ. ಜನಜಾತಿಯ ಗೌರವ್ ದಿವಸದಂದು ದೇಶದ ಜನಜಾತಿಯ ಜನರ ಸಾಧನೆಗಳು, ಸಂಸ್ಕೃತಿಗಳು, ಐತಿಹ್ಯಗಳು ಮತ್ತು ಭಾರತೀಯ ಸ್ವಾತಂತ್ರ‍್ಯ ಹೋರಾಟದಲ್ಲಿ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಲಾಗುತ್ತದೆ ಎಂದರು.

ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ಅಡಿಯಲ್ಲಿ ಕೇಂದ್ರ ಸರ್ಕಾರವು ಆದಿವಾಸಿಗಳ ಸಬಲೀಕರಣಕ್ಕಾಗಿ ಪ್ರಧಾನ ಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆ ಹಾಗೂ ಧರ್ತಿ ಆಬಾ ಜನಜಾತಿಯ ಉತ್ಕರ್ಷ ಅಭಿಯಾನ ಕಾರ್ಯಕ್ರಮಗಳ ಅಡಿಯಲ್ಲಿ ಆದಿವಾಸಿಗಳಿಗೆ ಜಲಜೀವನ್ ಮಿಷನ್, ಆಯುಷ್ಮಾನ್ ಕಾರ್ಡ್ ಮತ್ತು ಪ್ರಧಾನ ಮಂತ್ರಿ ಆರೋಗ್ಯ ಯೋಜನೆ ಸೇರಿದಂತೆ ಹಲವು ಯೋಜನೆಗಳ ಸೌಲಭ್ಯ ಒದಗಿಸಲಾಗುವುದು ಎಂದರು.

ಜಿ.ಪA. ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಶಾ, ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್, ಆಹಾರ ಇಲಾಖೆಯ ಉಪ ನಿರ್ದೇಶಕ ನಿಯಾಜ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಚಿದಾನಂದ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net