ಜಾತಿ ಗಣತಿ ಸ್ವಾಗತಿಸುವೆ

13 MANJU 03
Published on

ಹೊಸಪೇಟೆ: ರಾಜ್ಯ ಸರ್ಕಾರ ಜಾತಿ ಗಣತಿ ಸಮೀಕ್ಷೆಯನ್ನು ಸಂಪುಟದಲ್ಲಿ ಮಂಡಿಸಿರುವುದನ್ನು ನಾನು ಸ್ವಾಗತಿಸುವೆ. ಆರು ತಿಂಗಳ ಹಿಂದೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮಗೆ ಮಾತು ಕೊಟ್ಟಿದ್ದರು ಎಂದು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿಯಿಂದ ಯಾರಿಗೂ ಅನ್ಯಾಯ ಆಗುವುದಿಲ್ಲ. ಆಯಾ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಆಗಲಿದೆ. ಒಬಿಸಿಯವರಿಗೆ ಮೀಸಲಾತಿ ಹೆಚ್ಚಳ ಆಗುವ ಸಾಧ್ಯತೆ ಇದೆ. ಇದು ಸ್ವಾಗತಾರ್ಹ ನಿರ್ಣಯ ಆಗಿದೆ ಎಂದರು.

ಶಾಮನೂರು ಶಿವಶಂಕರಪ್ಪನವರು ನಮ್ಮ ಪಕ್ಷದ ಹಿರಿಯ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವರನ್ನು ವಿಶ್ವಾಸಕ್ಕೆ ಪಡೆದುಕೊಂಡೇ ಜಾತಿ ಗಣತಿ ವಿಷಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net