ಮನಸ್ಸಿನ ಒತ್ತಡ ನಿಯಂತ್ರಿಸಲು ಕ್ರೀಡೆ ಸಹಕಾರಿ

09 MANJU 06
Published on

ಹೊಸಪೇಟೆ: ಕ್ರೀಡೆ ಆರೋಗ್ಯವನ್ನು ವೃದ್ಧಿಗೊಳಿಸುವುದರ ಜತೆಗೆ ಮನಸ್ಸನ್ನು ಉಲ್ಲಾಸಿತಗೊಳಿಸಲು ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘದಿAದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ ಸರ್ಕಾರಿ ನೌಕರರ ವಿಜಯನಗರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಜಿಲ್ಲೆಯ ಎಲ್ಲ ನೌಕರರು ಒಂದೇ ಕಡೆ ಸೇರುವ ಅವಕಾಶವಾಗಿದೆ. ಮನುಷ್ಯ ಆರೋಗ್ಯವಾಗಿರಲು ಯೋಗ, ವಾಕಿಂಗ್ ಜತೆಗೆ ಯಾವುದಾದರೊಂದು ಕ್ರೀಡೆಯಲ್ಲಿ ಭಾಗವಹಿಸಬೇಕು. ಎಲ್ಲರೂ ಗ್ರಾಮೀಣ ಭಾಗದಿಂದ ಬಂದವರೆ ಹೆಚ್ಚಾಗಿದ್ದೀರಿ. ನಿಮ್ಮ ಪ್ರತಿಭೆಯನ್ನು ತೋರಿಸಲು ಇದೊಂದು ಸುವರ್ಣ ಅವಕಾಶ. ಆಟವನ್ನು ಕ್ರೀಡಾ ಸ್ಫೂರ್ತಿಯಿಂದ ಆಡಬೇಕು. ಮನಸ್ಸಿನ ಒತ್ತಡ ಕಡಿಮೆ ಮಾಡಿಕೊಳ್ಳಲು ಕ್ರೀಡೆ ಅಗತ್ಯ ಎಂದರು.

ಜಿಪA ಸಿಇಒ ನೊಂಗ್ಜಾಯ್ ಮೊಹಮದ್ ಅಲಿ ಅಕ್ರಮ್ ಷಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗ್ರೇಸಿ, ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಜಿ.ಮಲ್ಲಿಕಾರ್ಜುನಗೌಡ, ಪದಾಧಿಕಾರಿಗಳಾದ ರಾಘವೇಂದ್ರ ಎಸ್.ಹೆಗಡಿಯಾಳ್, ಕೆ.ಮಲ್ಲೇಶಪ್ಪ, ಟಿ.ಪಂಪಣ್ಣ, ಎಂ.ಪಿ.ಎA.ಮAಜುನಾಥ, ಕೆ.ಅಯ್ಯನಗೌಡ, ಎಸ್.ವೆಂಕಟೇಶ್, ಯೋಗೇಶ್ವರ, ಎನ್.ಜಿ.ಮನೋಹರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net