ಗ್ಯಾರಂಟಿ ಫಲಾನುಭವಿಗಳ ಸಮಸ್ಯೆಗೆ ಸ್ಪಂದಿಸಿ

05 MANJU 06
Published on

ಹೊಸಪೇಟೆ: ಸರ್ಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಸ್ಯೆಗಳನ್ನು ಆಲಿಸಿ, ಸಮರ್ಪಕವಾಗಿ ತಲುಪಿಸುವ ಕಾರ್ಯವನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅನುಷ್ಠಾನ ಸಮಿತಿ ಮಾಡಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಮೆಹರೋಜ್ ಖಾನ್ ಹೇಳಿದರು.

ನಗರದ ಜಿ.ಪಂ. ಕಚೇರಿಯಲ್ಲಿ ಸೋಮವಾರ ಸಮಿತಿಯ ಸಮಾಲೋಚನ ಸಭೆಯಲ್ಲಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಕೆಲವು ಸಣ್ಣಪುಟ್ಟ ಸಮಸ್ಯೆಗಳಿಂದ ಅರ್ಹ ಫಲಾನುಭವಿಗಳು ಯೋಜನೆಗಳನ್ನು ಪಡೆಯುವಲ್ಲಿ ವಂಚಿತರಾಗಿದ್ದರೆ, ಅಂತಹ ಸಮಸ್ಯೆಗಳಿಗೆ ಶೀಘ್ರ ಪರಿಹಾರ ನೀಡಲು ಸಮಿತಿ ಸದಸ್ಯರು ಕಾರ್ಯೋನ್ಮುಖರಾಗಬೇಕಿದೆ ಎಂದರು.

ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಲ್ಲಿ 8,007 ಮಂದಿ ನೋಂದಾಯಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಮೊದಲ ಬಾರಿಗೆ ವಿಜಯನಗರ ಜಿಲ್ಲೆಯಿಂದಲೇ ಯುವನಿಧಿ ಫಲಾನುಭವಿಗಳಿಗೆ ಕೌಶಲಾಧಾರಿತ ತರಬೇತಿ ಕಾರ್ಯಾಗಾರವನ್ನು ನೀಡಲು ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗುವುದು’ ಎಂದು ಅವರು ಮೆಹರೋಜ್ ಖಾನ್‌ ತಿಳಿಸಿದರು.

ಜಿಪಂ ಸಿಇಒ ನೊಂಗ್ಜಾಯ್‌ ಮೊಹಮ್ಮದ್ ಅಲಿ ಅಕ್ರಂ ಷಾ ಮಾತನಾಡಿ, ಅಹಾರ ಇಲಾಖೆಯಲ್ಲಿ ಹೊಸ ಪಡಿತರ ಅರ್ಜಿಗೆ ಅವಕಾಶ ನೀಡಿಲ್ಲ. ಈಗಾಗಲೇ ಶೇ 90ರಷ್ಟು ಪಡಿತರ ನೋಂದಣಿ ಕಾರ್ಯವಾಗಿದೆ. ಅನಾ ರೋಗ್ಯ ಪೀಡಿತರಿಗೆ ಆರೋಗ್ಯ ಸೇವೆಗಳಿಗೆ ಆದ್ಯತೆ ನೀಡಿ ರೇಷನ್ ಕಾರ್ಡ್‌ಗಳಲ್ಲಿ ಸೇರಿಸುವ ಪ್ರಕ್ರಿಯೆ ನಿರಂತರವಾಗಿ ಅವಕಾಶ ನೀಡಲಾಗಿದೆ. ಸಮಿತಿ ಸದಸ್ಯರು ಅಂತಹ ಪ್ರಕರಣಗಳಿದ್ದಲ್ಲಿ ಮಾಹಿತಿ ನೀಡಬೇಕು ಎಂದರು.

ಜಿಲ್ಲಾ ಮಟ್ಟದ ಪ್ರಾಧಿಕಾರದ ಉಪಾಧ್ಯಕ್ಷ ಕೆ.ಬದಾವಲಿ, ಕೆ.ಎಸ್.ಶಾಂತನಗೌಡ, ಎಚ್.ಜಂದಿಸಾಹೇಬ್, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಜೆ.ಎಂ.ಅನ್ನದಾನಸ್ವಾಮಿ, ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಶ್ವೇತಾ, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಹಟ್ಟಪ್ಪ, ಹೊಸಪೇಟೆ ವಿಭಾಗದ ಕೆಕೆಆರ್‌ಟಿಸಿ ಅಧಿಕಾರಿ ರಾಜಶೇಖರ್, ಜೆಸ್ಕಾಂ ಇಇ ಸತೀಶ್ ಕುಮಾರ್‌ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net