ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ

Published on

ಹೊಸಪೇಟೆ: ಈ ಶೈಕ್ಷಣಿಕ ಸಾಲಿನಲ್ಲಿ ಅಲ್ಪಸಂಖ್ಯಾತರ ಸರಕಾರಿ ಮೌಲಾನ ಆಜಾದ್ ಮಾದರಿ ಶಾಲೆಯನ್ನು ಉನ್ನತೀಕರಿಸಿ ಪ.ಪೂ. ಕಾಲೇಜನ್ನಾಗಿಸಿದ್ದು ಈ ಕಾಲೇಜಿಗೆ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಆಸಕ್ತ ಅಭ್ಯರ್ಥಿಗಳು ಜಂಬುನಾಥಹಳ್ಳಿಯ ಆದರ್ಶ ವಿದ್ಯಾಲಯದ ಪಕ್ಕದಲ್ಲಿರುವ ಹೊಸಪೇಟೆಯ ಮೌಲಾನಾ ಆಜಾದ್ ಮಾದರಿ ಕಾಲೇಜಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ: 9964732718ಗೆ ಸಂಪರ್ಕಿಸಬಹುದಾಗಿದೆ. ಅನುಭವ ಹಾಗೂ ಮೆರಿಟ್‌ಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ನಗರದ ಮೌಲಾನ ಆಜಾದ್ ಪ.ಪೂ. ಕಾಲೇಜು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net