ವಚನಗಳು ಸಮಾಜಕ್ಕೆ ದಾರಿದೀಪ

news
ಹೊಸಪೇಟೆ ಒಳಾಂಗಣ ಕ್ರೀಡಾಂಗಣದ ಸಭಾಂಗಣದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತೋತ್ಸವ ಕಾರ್ಯಕ್ರಮ ಹುಡಾ ಅಧ್ಯಕ್ಷ ಎಚ್.ಎನ್.ಮೊಹಮ್ಮದ್ ಇಮಾಮ್ ನಿಯಾಜಿ ಉದ್ಘಾಟಿಸಿದರು.
Published on

ಹೊಸಪೇಟೆ: ಶಿವಶರಣ ಹಡಪದ ಅಪ್ಪಣ್ಣನವರು 12ನೇ ಶತಮಾನದ ವಚನ ಚಳವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರಾಗಿದ್ದರು ಎಂದು ಹುಡಾ ಅಧ್ಯಕ್ಷ ಎಚ್.ಎನ್.ಮೊಹಮ್ಮದ್ ಇಮಾಮ್ ನಿಯಾಜಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಗೂ ನಗರಸಭೆಯಿಂದ ನಗರದ ಒಳಾಂಗಣ ಕ್ರೀಡಾಂಗಣದ ಸಭಾಂಗಣದಲ್ಲಿ ಅಯೋಜಿಸಲಾದ ಶಿವಶರಣ ಹಡಪದ ಅಪ್ಪಣ್ಣ ನವರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಶಿವಶರಣ ಹಡಪದ ಅಪ್ಪಣ್ಣ ನವರು ಜಾತಿ, ಧರ್ಮ, ವರ್ಣ ಹಾಗೂ ವರ್ಗರಹಿತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು. ಬಸವಣ್ಣನವರು 12ನೇ ಶತಮಾನದಲ್ಲಿ ನೂರಾರು ಶರಣರನ್ನು ಒಂದು ಕಡೆ ಸೇರಿಸಿ ಕಾಯಕ ವೃತ್ತಿಯನ್ನು ಪ್ರಾರಂಭಿಸಿದರು. ಯಾರು ಕಾಯಕವನ್ನು ಮಾಡುತ್ತಾರೋ ಅಲ್ಲಿ ನಿರುದ್ಯೋಗದ ಸಮಸ್ಯೆ ಇರುವುದಿಲ್ಲ. ಪ್ರತಿಯೊಬ್ಬರೂ ಕೂಡ ಅವರವರ ಕಾಯಕದಲ್ಲಿ ತೊಡಗಿಕೊಂಡರೆ ನಿರುದ್ಯೋಗವನ್ನು ತೊಲಗಿಸಬಹುದು. ನಿಜಶರಣ ಹಡಪದ ಅಪ್ಪಣ್ಣ ಅವರು ರಚಿಸಿದ್ದ ವಚನಗಳು ಸಮಾಜಕ್ಕೆ ದಾರಿದೀಪವಾಗಿವೆ ಎಂದರು.

ಸAಡೂರು ಮಠದ ಶ್ರೀ ಪ್ರಭು ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಕೊಪ್ಪಳ ಹಿಟ್ನಾಳನ ಸರ್ಕಾರಿ ಪದವಿ ಕಾಲೇಜಿನ ಪ್ರಾಧ್ಯಾಪಕ ಡಾ.ಟಿ.ಎಚ್.ಬಸವರಾಜ ಉಪನ್ಯಾಸ ನೀಡಿದರು. ಜಿ.ಪಂ. ಯೋಜನಾ ನಿರ್ದೇಶಕ ಅಶೋಕ ತೊಂಟಾದ, ಚುನಾವಣಾ ತಹಶೀಲ್ದಾರ್ ಕಾರ್ತಿಕ್, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net