ಭಾರತದಲ್ಲಿ ಬಹುತ್ವವನ್ನು ಗೌರವಿಸಲಿ

06 MANJU 01
Published on

ಹೊಸಪೇಟೆ: ಭಾರತವು ಬಹುತ್ವಗಳ ರಾಷ್ಟç, ಬಹುತ್ವವನ್ನು ಗೌರವಿಸಿದರೆ ಭಾರತ ಬದುಕುತ್ತದೆ. ಇಲ್ಲವಾದರೆ ನೆಮ್ಮದಿ ಇಲ್ಲವಾಗುತ್ತದೆ ಎಂದು ಕನ್ನಡ ವಿವಿಯ ವಿಶ್ರಾಂತ ಪ್ರಾಧ್ಯಾಪಕ ಡಾ.ರಹಮತ್ ತರೀಕೆರೆ ಅವರು ಅಭಿಪ್ರಾಯಪಟ್ಟರು.

ಕನ್ನಡ ವಿವಿಯ ಹಾಲುಮತ ಅಧ್ಯಯನ ಪೀಠದಿಂದ ಪಂಪ ಸಭಾಂಗಣದಲ್ಲಿ ಬುಧವಾರ ಹಾಲುಮತ ಸಾಹಿತ್ಯ ಸಂಸ್ಕöÈತಿ ಅಧ್ಯಯನ ಕಮ್ಮಟವನ್ನು ಉದ್ಘಾಟಿಸಿ, ಮಾತನಾಡಿದರು. ಮತ ಎಂದರೆ ಲೋಕ ದೃಷ್ಟಿ ತತ್ವಶಾಸ್ತç ಎಂದು ಅರ್ಥವಾಗುತ್ತದೆ. ಕರ್ನಾಟಕದ ಎಷ್ಟೋ ಸಮುದಾಯಗಳಿಗೆ ಅವುಗಳನ್ನು ಅರಿವ ಕೆಲಸ ಇನ್ನೂ ಆಗಿಲ್ಲ. ಸಮುದಾಯಗಳ ಅಧ್ಯಯನ ವರ್ತಮಾನಗಳಿಂದ ಕೂಡಿರಬೇಕು. ಪ್ರಾದೇಶಿಕ ನೆಲೆಯಲ್ಲಿ ಅಧ್ಯಯನ ಮಾಡಬೇಕಾಗಿದೆ. ಬಹುಮುಖ್ಯವಾಗಿ ದಲಿತ ಎಂಬ ಪದ ರಾಜಕೀಯ, ಸಾಮಾಜಿಕವಾಗಿ ಬಳಕೆಯಲ್ಲಿರುವುದರಿಂದ ಪರಿಚಿತವಾಗಿದ್ದು, ಭಾರತದಲ್ಲಿ ಪದರ ರೂಪದಲ್ಲಿ ಶ್ರೇಣಿಕೃತ ವ್ಯವಸ್ಥೆಯಲ್ಲಿ ದ್ವೇಷವನ್ನು ಕಾಣಬಹುದು. ಅದರಲ್ಲೂ ಮುಸ್ಲಿಮರಲ್ಲಿಯೂ ಕೂಡ ಅಸ್ಪöÈಶ್ಯತೆವಿದ್ದು, ಇದು ಅಷ್ಟಾಗಿ ಬೆಳಕಿಗೆ ಬಂದಿಲ್ಲ. ಇಂತಹ ಸಮುದಾಯಗಳ ಮೂಲ ನೆಲೆಯಲ್ಲಿ ಹರಿಯಬೇಕಾದರೆ ಏಕರೂಪಿ ಪರಿಭಾಷೆಯನ್ನು ತೆಜಿಸಬೇಕು. ಹಾಗೆಯೇ ಜಾತಿ ಸಮೂಹದ ಕಲ್ಪನೆಯಿಂದ ಹೊರಬಂದು ಸಂಶೋಧನೆ ನಡೆಯಬೇಕೆಂದು ಹೇಳಿದರು.

ಕನ್ನಡ ವಿವಿಯ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಾಲುಮತ ಸಂಸ್ಕöÈತಿ ಎನ್ನುವುದು ಬಹಳ ವಿಶಾಲವಾದ ಅರ್ಥದಲ್ಲಿ ಬಳಕೆಯಲ್ಲಿರುವ ಸಂಸ್ಕöÈತಿ. ಅನೇಕ ಆಚರಣೆಗಳು ಈ ಸಂಸ್ಕöÈತಿಯಲ್ಲಿ ಒಳಗಾಗಿವೆ. ಇಂದು ಅನೇಕ ಕಾರಣಗಳಿಗಾಗಿ ಅನಾದಿ ಕಾಲದಲ್ಲಿ ಇದ್ದಂತಹ ಆಚರಣೆ ಮತ್ತು ಸಂಪ್ರದಾಯಗಳು ಅನ್ಯಸಂಸ್ಕöÈತಿಗೆ ಪ್ರಭಾವಕ್ಕೆ ಒಳಗಾಗಿವೆ. ಇನ್ನು ಕೆಲವೇ ದಿನಗಳಲ್ಲಿ ಮೂಲ ಆಚರಣೆಗಳ ಲಕ್ಷಣಗಳು ಮರೆಯಾಗುವುದರಲ್ಲಿ ಅನುಮಾನವಿಲ್ಲ. ಈ ನಿಟ್ಟಿನಲ್ಲಿ ಇಂತಹ ಅಧ್ಯಯನ ಕಮ್ಮಟಗಳ ಮೂಲಕ ಅಂತಹ ಅಳಿವಿನ ಅಂಚಿನಲ್ಲಿರುವ ಸಂಸ್ಕöÈತಿಯನ್ನು ರಕ್ಷಿಸಬೇಕು ಎಂದರು.

ಹಾಲುಮತ ಅಧ್ಯಯನ ಪೀಠದ ಸಂಚಾಲಕ ಡಾ.ಎಫ್.ಟಿ.ಹಳ್ಳಿಕೇರಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net