ಹಂಪಿಯಲ್ಲಿ ಪಾರಂಪರಿಕ ನಡಿಗೆ ನಾಳೆ

Published on

ಹೊಸಪೇಟೆ: ವಿಶ್ವ ಪ್ರವಾಸೋದ್ಯಮ ದಿನಾಚರಣೆ ನಿಮಿತ್ತ ಸೆ.26ರಂದು ಬೆಳಿಗ್ಗೆ 6 ರಿಂದ 9 ಗಂಟೆಯವರೆಗೆ ಎದುರು ಬಸವಣ್ಣ ದಿಂದ ಮಾತಂಗ ಪರ್ವತದವರೆಗೆ ಪಾರಂಪರಿಕ ನಡಿಗೆ ಕಾರ್ಯಕ್ರಮ ನಡೆಯಲಿದೆ.

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಸೆ.27ರಂದು ಸಂಜೆ 4 ಗಂಟೆಗೆ ಹಂಪಿಯ ಶ್ರೀ ಪಂಪಾ ವಿರೂಪಾಕ್ಷೇಶ್ವರ ದೇವಸ್ಥಾನ ಮುಂಭಾಗದ ರಥ ಬೀದಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಉಪಸ್ಥಿತಿ. ಶಾಸಕ ಎಚ್.ಆರ್.ಗವಿಯಪ್ಪ ಅಧ್ಯಕ್ಷತೆ ವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net