ಹಂಪಿಗೆ ಪ್ರವಾಸಿಗರ ದಂಡು

Hospet Hampi corwd
ಹಂಪಿ ವಿರೂಪಾಕ್ಷೇಶ್ವರ ರಥಬೀದಿಯಲ್ಲಿ ಭಾನುವಾರ ಕಂಡು ಬಂದ ಪ್ರವಾಸಿಗರು.
Published on

ಹೊಸಪೇಟೆ: ಎರಡನೇ ಶನಿವಾರ ಹಾಗೂ ವೀಕೆಂಡ್ ಇದ್ದುದ್ದರಿಂದ ವಿಶ್ವವಿಖ್ಯಾತ ಹಂಪಿ ಸ್ಮಾರಕಗಳ ವೀಕ್ಷಣೆಗೆ ಪ್ರವಾಸಿಗರ ದಂಡು ಹರಿದು ಬಂದಿದೆ.

ಭಾನುವಾರ ಎಂಟು ಸಾವಿರಕ್ಕೂ ಅಧಿಕ ಪ್ರವಾಸಿಗರು ಸ್ಮಾರಕಗಳನ್ನು ಕಣ್ತುಂಬಿಕೊಂಡರು. ಕೆಲ ತಿಂಗಳ ಹಿಂದೆ ಬಿಸಿಲಿನ ಕಾರಣಕ್ಕೆ ಹಂಪಿ ನೋಡಲು ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿತ್ತು.

ಈಗ ವಾತಾವರಣದಲ್ಲೂ ಬದಲಾವಣೆ ಆಗಿದೆ. ಹಾಗಾಗಿ ರಾಜ್ಯ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ತೆಲಂಗಾಣ ಸೇರಿ ವಿವಿಧ ಪ್ರದೇಶಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ.

ಹಂಪಿಯ ಹೇಮಕೂಟ ಹಾಗೂ ಮಾತಂಗ ಪರ್ವತದಲ್ಲಿ ಸೂರ್ಯೋದಯ-ಸೂರ್ಯಾಸ್ತ ವೀಕ್ಷಣೆ ಮಾಡುತ್ತಿದ್ದಾರೆ. ಇದರೊಂದಿಗೆ ಸಮೀಪದ ಕಮಲಾಪುರ ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್‌ಗೂ ಭೇಟಿ ನೀಡುತ್ತಿದ್ದಾರೆ. ತುಂಗಭದ್ರಾ ಜಲಾಶಯ ಹಾಗೂ ಹಿನ್ನೀರು ಪ್ರದೇಶದಲ್ಲಿರುವ ಉದ್ಯಾನಕ್ಕೂ ತೆರಳಿ ಸಂಭ್ರಮಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net