ಬಾಗಿಲಿಗೆ ಆರೋಗ್ಯ ಸೇವೆ

31 MANJU 02
Published on

ಹೊಸಪೇಟೆ: ನಗರ ಪ್ರದೇಶದ ಬಡವರ ಮನೆ ಬಾಗಿಲಿಗೆ ಪ್ರಾಥಮಿಕ ಆರೋಗ್ಯ ಸೇವೆಯನ್ನು ಒದಗಿಸುವ ಸದುದ್ದೇಶದಿಂದ ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರವನ್ನು ಪ್ರಾರಂಭಿಸಲಾಗಿದೆ ಎಂದು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.

ನಗರದ ಕಾರಿಗನೂರು ಹಾಗೂ ಟಿಬಿ ಡ್ಯಾಂನ 30ನೇ ವಾರ್ಡ್ನಲ್ಲಿ ನೂತನ ನಮ್ಮ ಕ್ಲಿನಿಕ್ ಕೇಂದ್ರಗಳನ್ನು ಶುಕ್ರವಾರ ಸಂಜೆ ಉದ್ಘಾಟಿಸಿ ಮಾತನಾಡಿದರು.

ರಾಷ್ಟಿçÃಯ ನಗರ ಆರೋಗ್ಯ ಅಭಿಯಾನದಡಿಯಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯ ಸೇವೆಗಳು ದೊರೆಯುವ ನಿಟ್ಟಿನಲ್ಲಿ ಸರ್ಕಾರ ಆದ್ಯತೆ ನೀಡಲಾಗಿದೆ. ನಗರವಾಸಿಗಳು ಉತ್ತಮ ಆರೋಗ್ಯಕ್ಕಾಗಿ ನಮ್ಮ ಕ್ಲಿನಿಕ್ ಸೇವೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಗುಣಮಟ್ಟದ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ಆರೋಗ್ಯ ಸಿಬ್ಬಂದಿಗಳು ಕರ್ತವ್ಯ ನಿರತರಾಗಿದ್ದಾರೆ ಎಂದರು.

ಡಿಎಚ್‌ಒ ಡಾ.ಎಲ್.ಆರ್.ಶಂಕರ್ ನಾಯ್ಕ ಮಾತನಾಡಿ, ಕೇಂದ್ರಗಳಲ್ಲಿ ನವಜಾತ ಶಿಶುವಿನ ಸಮಗ್ರ ಆರೋಗ್ಯ ಆರೈಕೆ ಮಾಡಲಾಗುತ್ತದೆ. ಸಾರ್ವತ್ರಿಕ ಲಸಿಕಾಕರಣ ಸೇವೆಗಳು ಹಾಗೂ ಕುಟುಂಬ ಕಲ್ಯಾಣ, ಗರ್ಭನಿರೋಧಕ ಸೇವೆಗಳು ಮತ್ತು ಇತರ ಸಂತಾನೋತ್ಪತ್ತಿ ಆರೋಗ್ಯ ಸೇವೆಗಳು ಒದಗಿಸಲಾಗುತ್ತದೆ. ಸಾಂಕ್ರಾಮಿಕ ರೋಗಗಳಿಗೆ ಚಿಕಿತ್ಸೆ ಸೇರಿದಂತೆ ಇತರೆ ತುರ್ತು ಚಿಕಿತ್ಸೆ ಒಳಗೊಂಡAತೆ ವಿವಿಧ ಆರೋಗ್ಯ ಸೇವೆಗಳನ್ನು ನೀಡಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ನಮ್ಮ ಕ್ಲಿನಿಕ್ ಕೇಂದ್ರದ ಸೌಲಭ್ಯಗಳನ್ನು ಪಡೆಯಬೇಕು. 30 ವರ್ಷ ದಾಟಿದ ಪ್ರತಿಯೊಬ್ಬರು ಪ್ರತಿ ವರ್ಷ ಒಂದು ಸಲ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.

ಜಿಲ್ಲಾ ಆರ್‌ಸಿಎಚ್ ಡಾ.ಬಿ.ಜಂಬಯ್ಯ, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಭಾಸ್ಕರ್, ತಾಲೂಕು ವೈದ್ಯಾಧಿಕಾರಿ ಡಾ.ವಿನೋದ್ ಕುಮಾರ್, ನಮ್ಮ ಕ್ಲಿನಿಕ್ ವೈದ್ಯೆ ಡಾ.ಸುಧಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net