ಆರೋಗ್ಯ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ

23 MANJU 01
Published on

ಹೊಸಪೇಟೆ : ನಿತ್ಯ ಸಾರ್ವಜನಿಕ ಸೇವೆಯಲ್ಲಿ ಕಾರ್ಯನಿರತರಾಗಿರುವ ಸಾರಿಗೆ ಸಿಬ್ಬಂದಿಗಳು ತಮ್ಮ ಆರೋಗ್ಯದ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಆರ್.ವಿ.ಪುರಾಣಿಕ್ ಹೇಳಿದರು.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಹಯೋಗದಲ್ಲಿ ನಗರದ ಕೆಕೆಎಸ್‌ಆರ್‌ಟಿಸಿ ಬಸ್ ಡಿಪೋದಲ್ಲಿ ಶುಕ್ರವಾರ ಉಚಿತ ಅರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಾರಿಗೆ ಇಲಾಖೆ ಸಿಬ್ಬಂದಿಗಳು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸದೇ ನಿರ್ಲಕ್ಷಿಸುವುದು ಸಾಮಾನ್ಯ. ಆದ್ದರಿಂದ ಸಾರಿಗೆ ಸಿಬ್ಬಂದಿಗಳ ಆರೋಗ್ಯದ ಕಡೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಸಾರಿಗೆ ಸಿಬ್ಬಂದಿಗೆ ರಕ್ತದೊತ್ತಡ, ಮಧುಮೇಹ, ಕಣ್ಣು ಪರೀಕ್ಷೆ, ಹಲ್ಲಿನ ಪರೀಕ್ಷೆ ತಪಾಸಣೆ ಕ್ಷಯರೋಗ ಸೇರಿದಂತೆ ಸಾಮಾನ್ಯ ರೋಗಗಳ ಬಗ್ಗೆ ತಪಾಸಣೆ ನಡೆಸಲಾಯಿತು.

ವಿಭಾಗೀಯ ನಿಯಂತ್ರಣಾಧಿಕಾರಿ ಆರ್.ವಿ.ಪುರಾಣಿಕ್ ಪೋಸ್ಟರ್ ಬಿಡುಗಡೆಗೊಳಿಸಿದರು. ವೈದ್ಯರಾದ ಡಾ.ಸಹನಾ, ಡಾ.ಲಕ್ಷ್ಮೀ, ಎಚ್‌ಡಿಎಫ್‌ಸಿ ಬ್ಯಾಂಕ್‌ನ ವ್ಯವಸ್ಥಾಪಕರ ಆನಂದ್, ಕ್ಷಯರೋಗ ಮೇಲ್ವಿಚಾರಕ ಕಾಸಿಮ್ ಸಾಬ್, ಐಸಿಟಿಸಿ ಸಮಾಲೋಚಕ ಸಿದ್ದೇಶ್ವರ, ವಿಭಾಗಿಯ ಘಟಕ ಅಧ್ಯಕ್ಷ ಪರಮೇಶ್ವರಪ್ಪ ತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net