

ಹೊಸಪೇಟೆ: ಇಲ್ಲಿನ ಪಟ್ಟಣ ಪೊಲೀಸ್ ಠಾಣೆಯ ಮುಖ್ಯ ಪೇದೆ ಆರ್.ದಾದಾ ಸಾಹೇಬ್ (51) ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಳೆದ 26 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯದಲ್ಲಿದ್ದ ಬಳ್ಳಾರಿ ಜಿಲ್ಲೆಯ ಹಲಕುಂದಿ ಗ್ರಾಮದ ದಾದಾ ಸಾಹೇಬ್‌ಗೆ ಭಾನುವಾರ ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡಿದೆ. ನಗರದ ಸರ್ಕಾರಿ ಆಸ್ಪತ್ರೆಗೆ ಕರೆ ತರುವಾಗ ಮಾರ್ಗ ಮಧ್ಯದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನಲಾಗಿದೆ.
ಮೃತರು ಪತ್ನಿ, ಒರ್ವ ಪುತ್ರ, ಒರ್ವ ಪುತ್ರಿ ಇದ್ದಾರೆ. ಸುದ್ದಿ ತಿಳಿಯುತ್ತಲೆ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಆಗಮಿಸಿದ ಅವರ ಸ್ನೇಹಿತರು ಮತ್ತು ಪೊಲೀಸ್ ಸಹುದ್ಯೋಗಿಗಳು ದಾದಾ ಸಾಹೇಬ್ ನಿಧನಕ್ಕೆ ಕಂಬನಿ ಮಿಡಿದರು. ಎಸ್ಪಿ ಬಿ.ಎಲ್.ಶ್ರೀಹರಿಬಾಬು, ಎಎಸ್ಪಿ ಸಲೀಂ ಪಾಷಾ, ಡಿವೈಎಸ್ಪಿ ಟಿ.ಮಂಜುನಾಥ ಸಂತಾಪ ಸೂಚಿಸಿದ್ದಾರೆ. ಹಲಕುಂದಿ ಗ್ರಾಮದಲ್ಲಿ ಭಾನುವಾರ ಸಂಜೆ ಅಂತ್ಯಸAಸ್ಕಾರ ನಡೆಯಿತು.