ಹೊಸಪೇಟೆ: ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯಕ್ಕಾಗಿ ಕಮಲಾಪುರ ಮತ್ತು ಮರಿಯಮ್ಮನಹಳ್ಳಿಯಲ್ಲಿ ಖಾಸಗಿ ಕಟ್ಟಡ ಬಾಡಿಗೆ ಅಧಾರದಲ್ಲಿ ಅಗತ್ಯವಿದ್ದು ಆಸಕ್ತ ಕಟ್ಟಡ ಮಾಲೀಕರಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಾಹೇಖಾ ಅಹ್ಮದಿ ತಿಳಿಸಿದ್ದಾರೆ.
ಕಟ್ಟಡ ಮಾಲೀಕರು ತಮ್ಮ ಕಟ್ಟಡದ ದಾಖಲೆಗಲೊಂದಿಗೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು(ಗ್ರೇಡ್-1), ಹೊಸಪೇಟೆ ಇವರಿಗೆ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ ಮೊ. 8105909630, 9535860275, 9880178179 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.