ವಸತಿ ಶಾಲೆಗಳಿಗೆ ಅರ್ಜಿ ಆಹ್ವಾನ

Published on

ಹೊಸಪೇಟೆ: 2025-26 ನೇ ಶೈಕ್ಷಣಿಕ ವರ್ಷಕ್ಕೆ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆಂಗ್ಲ ಮಾಧ್ಯಮ ಮತ್ತು ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಸಿಬಿಎಸ್‌ಇ ವಸತಿ ಶಾಲೆಯ ದಾಖಲಾತಿಗೆ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಗುಂಡಪ್ಪ ತಿಳಿಸಿದ್ದಾರೆ.

ಪ್ರವೇಶಕ್ಕಾಗಿ ಆನ್‌ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಆಸಕ್ತಿಯುಳ್ಳ ವಿದ್ಯಾರ್ಥಿಗಳು ಹಾಗೂ ಪಾಲಕರು ಸೇವಾಸಿಂಧು ಪೋರ್ಟಲ್ ಲಿಂಕ್ hಣಣಠಿs://sevಚಿsiಟಿಜhuseಡಿviಛಿes.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಮಾ.10 ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಬಹುದು. ಹೆಚ್ಚಿನ ವಿವರಗಳನ್ನು hಣಣಠಿ://ಜom.ಞಚಿಡಿಟಿಚಿಣಚಿಞಚಿ.gov.iಟಿ ವೆಬ್ ಸೈಟ್ ನಲ್ಲಿ ನೋಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net