ಹುಡಾ ಅಧ್ಯಕ್ಷರಾಗಿ ಇಮಾಮ್ ಅಧಿಕಾರ ಸ್ವೀಕಾರ

HUDA
ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಈರಣ್ಣ ಬಿರಾದಾರ ಅವರಿಂದ ಅಧ್ಯಕ್ಷರಾಗಿ ಎಚ್ಎನ್ ಮಹಮ್ಮದ್ ಇಮಾಮ್ ನಿಯಾಜಿ ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದರು.
Published on

ಹೊಸಪೇಟೆ: ಇಲ್ಲಿನ ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ (ಹುಡಾ) ಎಚ್‌ಎನ್ ಮಹಮ್ಮದ್ ಇಮಾಮ್ ನಿಯಾಜಿಗೆ ನೇಮಕ ಮಾಡಿ ಆದೇಶಿಸಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಲತಾ ಆದೇಶದಲ್ಲಿ ತಿಳಿಸಿದ್ದಾರೆ. ಅಧಿಕಾರ ಸ್ವೀಕಾರ ಮಾಡಿದರು

ಈ ಹಿಂದೆ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶಿಸಿತ್ತು. ಆದರೆ, ರಾತ್ರಿಯಾದ ಆದೇಶ, ಬೆಳಗ್ಗೆ ಅಧಿಕಾರ ಸ್ವೀಕಾರ ಮಾಡುವ ಮೊದಲು ಮತ್ತೆ ಆದೇಶ ಹಿಂಪಡೆಯಲಾಗಿದೆ ಎಂಬ ಮರು ಆದೇಶ ಬಂದಿರುವುದನ್ನು ಹುಡಾ ಆಯುಕ್ತರು ಗಮನಕ್ಕೆ ತಂದಿದ್ದರು. ಈ ಬಾರಿ ಆದೇಶ ಬಂದ ಕೂಡಲೇ ಅವರು ಹುಡಾ ಆಯುಕ್ತ ಈರಣ್ಣ ಬಿರಾದಾರ ಅವರಿಂದ ಅಧಿಕಾರ ಸ್ವೀಕರಿಸಿದರು.

ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವತಃ ಶಾಸಕ ಎಚ್.ಆರ್.ಗವಿಯಪ್ಪನವರ ಜತೆಗೆ ಚರ್ಚಿಸಿ ಈ ಬಾರಿ ಇಮಾಮ್ ಅವರಿಗೆ ಅಧ್ಯಕ್ಷ ಹುದ್ದೆ ಕೊಡೋಣ ಎಂದು ಹೇಳಿದ ಬಳಿಕ ಮುಖ್ಯಮಂತ್ರಿ ಅವರ ಮಾತಿಗೆ ಶಾಸಕ ಗವಿಯಪ್ಪ ಒಪ್ಪಿಗೆ ಸೂಚಿಸಿದ ಬಳಿಕವೇ ಈ ಆದೇಶ ಹೊರ ಬಿದ್ದಿದೆ ಎಂದು ಮೂಲಗಳು ತಿಳಿಸಿವೆ.

ಹೊಸಪೇಟೆ ನಗರದಲ್ಲಿ ಹೊಸ ಲೇಔಟ್ ನಿರ್ಮಾಣ ಸೇರಿದಂತೆ ಈ ಹಿಂದಿನ ಲೇಔಟ್ ನಿವಾಸಿಗಳ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು. ಶಾಸಕರ ಜತೆಗೆ ಚರ್ಚಿಸಿ ನಗರದಲ್ಲಿ ಅಭಿವೃದ್ಧಿ ಕಾರ್ಯಕೈಗೊಳ್ಳಲಾಗುವುದು. ಜೂ.21ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಕೆಡಿಪಿ ಸಭೆ ನಡೆಸಲು ಆಗಮಿಸುತ್ತಿದ್ದಾರೆ. ನಗರದ ಹಲವು ಸಮಸ್ಯೆಗಳಿಗೂ ಪರಿಹಾರ ದೊರೆಯುವ ನಿರೀಕ್ಷೆ ಇದೆ. - ಎಚ್‌ಎನ್ ಮಹಮ್ಮದ್ ಇಮಾಮ್ ನಿಯಾಜಿ, ನೂತನ ಹುಡಾ ಅಧ್ಯಕ್ಷ, ಹೊಸಪೇಟೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net