ಒತ್ತಾಯಪೂರಕವಾಗಿ ದುಡಿಸಿಕೊಳ್ಳುವುದು ಅಪರಾಧ

01 MANJU 05
Published on

ಹೊಸಪೇಟೆ: ಸಾರ್ವಜನಿಕರನ್ನು ಮೋಸ, ವಂಚನೆ, ಒತ್ತಾಯಪೂರಕವಾಗಿ ದುಡಿಸಿಕೊಳ್ಳುವುದು ಕಾನೂನು ಹಿತ ದೃಷ್ಟಿಯಿಂದ ದೊಡ್ಡ ಅಪರಾಧ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಪ್ರಶಾಂತ ನಾಗಲಾಪುರ್ ಹೇಳಿದರು.

ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಗರದ ಚಿತ್ತವಾಡ್ಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಈಚೇಗೆ ಮಾನವ ಕಳ್ಳ ಸಾಗಾಣಿಕೆ ಸಮಾಜದಲ್ಲಿ ಬಹುದೊಡ್ಡ ಸಮಸ್ಯೆಯಾಗಿ ಬೆಳೆದಿದೆ. ಮಹಿಳೆಯರು ಮತ್ತು ಮಕ್ಕಳು ಎಚ್ಚೆತ್ತುಕೊಳ್ಳಬೇಕು. ಬಡತನ, ನಿರುದ್ಯೋಗ, ತಂದೆ-ತಾಯಿಗಳಿಗೆ ವಿದ್ಯಾಭ್ಯಾಸದ ಕೊರತೆ ಇವೆಲ್ಲವೂ ಮಾನವ ಕಳ್ಳ ಸಾಗಾಣಿಕೆಗೆ ದಾರಿಯಾಗಿದೆ. ಮಹಿಳೆಯರು ಆಮಿಷಗಳಿಗೆ ಬಲಿಯಾಗಿ ಮೋಸ ಹೋಗುವುದನ್ನು ತಡೆಯಬೇಕು. ಮಕ್ಕಳನ್ನು ತುಂಬಾ ಜಾಗೃತೆಯಿಂದ ಬೆಳೆಸಲು ಹೆಚ್ಚು ಅರಿವು ಮೂಡಿಸಬೇಕಿದೆ. ಮಕ್ಕಳಿಗೆ ಕಾನೂನಾತ್ಮಕ ಸೌಲಭ್ಯಗಳನ್ನು ದೊರಕಿಸಿದಾಗ ಮಾತ್ರ ಮಗುವು ಬಲಿಷ್ಠವಾಗಿ ಬೆಳೆಯುತ್ತದೆ. ಸಾರ್ವಜನಿಕರಲ್ಲಿ ಕಾನೂನು ಮತ್ತು ಶಿಕ್ಷೆಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯ ಅಧಿಕಾರಿಗಳಿಂದಾಗಬೇಕು. ಮಾನವ ಕಳ್ಳ ಸಾಗಣಿಕೆಯನ್ನು ಸಂಪೂರ್ಣ ನಿರ್ಮೂಲನೆಗೆ ಸರ್ಕಾರ ಮತ್ತು ಸಂಘಸAಸ್ಥೆಗಳ ಸಹಕಾರ ಅತ್ಯಗತ್ಯವಾಗಿದೆ. ಅಪರಾಧ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರಿಗೆ ಕಾನೂನು ಅರಿವು ನೆರವು ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಬೇಕಿದೆ ಎಂದರು.

ನ್ಯಾಯಾಧೀಶರಾದ ಜೆ.ಚೈತ್ರ, ಶೃತಿ ತೇಲಿ, ಕಾಲೇಜಿನ ಪ್ರಾಂಶುಪಾಲ ನಾಗರಾಜ ಹವಲ್ದಾರ್, ವಕೀಲರ ಸಂಘ ಪ್ರಧಾನ ಕಾರ್ಯದರ್ಶಿ ಪಿ.ಶ್ರೀನಿವಾಸ ಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಯೋಜನಾಧಿಕಾರಿ ಸಿಂಧು ಅಂಗಡಿ, ಪಿಎಸ್‌ಐ ಸೋಮ್ಲನಾಯಕ್, ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕ ಜೆ.ಬಿ.ದೂಪದ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net