ನೇಮಕಾತಿಗೆ ಅರ್ಜಿ ಆಹ್ವಾನ

Published on

ಹೊಸಪೇಟೆ: ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛ ಭಾರತ್ ಮಿಷನ್ 2.0 ಯೋಜನೆಯಡಿಯಲ್ಲಿ ಐಇಸಿ ಚಟುವಟಿಕೆಗಳ ನಿರ್ವಹಣೆಗೆ ಸ್ವಸಹಾಯ ಮಹಿಳಾ ಸದಸ್ಯರನ್ನು ಕಮ್ಯುನಿಟಿ ಮೊಬಲೈಜರ್ ಹುದ್ದೆಗೆ ಮಹಿಳಾ ಸದಸ್ಯರ ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್ ತಿಳಿಸಿದ್ದಾರೆ.

ಜಿಲ್ಲೆಯ ಹೊಸಪೇಟೆ ನಗರಸಭೆ, ಹರಪನಹಳ್ಳಿ, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ, ಕಮಲಾಪುರ ಪುರಸಭೆ, ಕೂಡ್ಲಿಗಿ, ಕೊಟ್ಟೂರು ಮತ್ತು ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ನಲ್ಮ್-ಡೇ ಯೋಜನೆಯಡಿ ನೋಂದಾಯಿತ ಸ್ವಸಹಾಯ ಮಹಿಳಾ ಗುಂಪು ಸದಸ್ಯರಿಂದ ಮೂರು ವರ್ಷಗಳ ಪೂರ್ಣಾವಧಿಗೆ ಐಇಸಿ ಚಟುವಟಿಕೆಗಳನ್ನು ನಿರ್ವಹಿಸಲು ಕಮ್ಯುನಿಟಿ ಮೊಬಲೈಜರ್ ಹುದ್ದೆಗೆ ಅರ್ಜಿ ಕರೆಯಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ಸ್ಥಳೀಯ ಸಂಸ್ಥೆಗಳಲ್ಲಿ ಸಂಪರ್ಕಿಸಿ. ಮೇ.12 ರ ಸಂಜೆ 5ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net