ಆದಾಯ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಆಧ್ಯತೆ

18 MANJU 06
Published on

ಹೊಸಪೇಟೆ: ಅಭಿವೃದ್ಧಿ ಸೇರಿ ವಿವಿಧ ವಲಯಗಳ ಸೂಚ್ಯಂಕ ಆಧರಿಸಿ ಗುರುತಿಸಿ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪರಾಮರ್ಶಿಸಿ ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ ಪ್ರೊ.ಎಂ.ಗೋವಿAದರಾವ್ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಬುಧವಾರ ಮಾತನಾಡಿದರು,

ಡಾ.ಡಿ.ಎಂ.ನAಜುAಡಪ್ಪರವರ 2002ರ ವರದಿಯಲ್ಲಿ ಅಂದಿನ 176 ತಾಲೂಕುಗಳನ್ನು ಹಿಂದುಳಿದ, ಅತಿ ಹಿಂದುಳಿದ, ಅತ್ಯಂತ ಹಿಂದುಳಿದ ಹಾಗೂ ಅಭಿವೃದ್ದಿ ಹೊಂದಿದ ತಾಲೂಕುಗಳೆಂದು 4 ವರ್ಗದಲ್ಲಿ ವರ್ಗೀಕರಿಸಿ ಅದಕ್ಕನುಗುಣವಾಗಿ ಅನುದಾನ ಹಂಚಿಕೆಗೆ ಶಿಫಾರಸ್ಸು ಮಾಡಿದ್ದರು. ಇದರ ಅನ್ವಯ ಗುರುತಿಸಲಾದ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಸರ್ಕಾರ 31 ಸಾವಿರ ಕೋಟಿ ರೂ. ವೆಚ್ಚ ಮಾಡಿದೆ. ಅಸಮತೋಲನ ಹೆಚ್ಚಾದಾಗ ಪ್ರದೇಶಗಳು ಹಿಂದುಳಿಯಲಿವೆ. ನಂಜುAಡಪ್ಪ ವರದಿ ಅನುಷ್ಠಾನದಿಂದ ಹೇಗೆ ಅಭಿವೃದ್ದಿಯಾಗಿದೆ ಎಂಬುದನ್ನು ಸೂಚ್ಯಂಕದ ಅಧಾರದ ಮೇಲೆ ಗುರುತಿಸಲಾಗುತ್ತದೆ. ತಲಾ ಆದಾಯ, ಶಿಕ್ಷಣ, ಆರೋಗ್ಯ ಇನ್ನಿತರ ಕ್ಷೇತ್ರಗಳಲ್ಲಿನ ಸುಧಾರಣೆ, ಬೆಳವಣಿಗೆಯ ಬಗ್ಗೆಯು ಸಮಿತಿಯು ಪರಿಶೀಲಿಸಲಿದೆ. ಇಲ್ಲಿನ ಯುವಕರಿಗೆ ಉದ್ಯೋಗ ದೊರೆಯುವಂತೆ ಮಾಡುವುದು ಹಾಗೂ ವಲಸೆ ಹೋಗುವುದನ್ನು ಕಡಿಮೆ ಮಾಡುವುದು ಬಹಳ ಮುಖ್ಯವಾಗಿದೆ ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ ಎಂದರು.

ಶಾಸಕ ಎಚ್.ಆರ್.ಗವಿಯಪ್ಪ ಮಾತನಾಡಿ, ಜಿಲ್ಲೆಯ ಅರ್ಥಿಕ ಅಭಿವೃದ್ದಿಗೆ ಪ್ರವಾಸೋದ್ಯಮದ ಬಹಳ ಮುಖ್ಯವಾಗಿದೆ. ಪ್ರವಾಸಿತಾಣ ಹಂಪಿ ಸೇರಿ ವಿವಿಧ ಕ್ಷೇತ್ರಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆ ಸೇರಿ ವಿವಿಧ ಕಾರ್ಖನೆಗಳನ್ನು ಸ್ಥಾಪಿಸಬೇಕಿದೆ. ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಉದ್ಯೋಗ ಸೃಷ್ಠಿ, ನೀರಾವರಿಗೆ ಗಮನಹರಿಸಬೇಕಿದೆ. ಜಿಲ್ಲಾ ಕೇಂದ್ರದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಳು, ವೈದಕೀಯ ಕಾಲೇಜು, ಸಣ್ಣ ಉದ್ಯಮಗಳಿಗೂ ಹೆಚ್ಚಿನ ಉತ್ತೇಜನ ನೀಡಬೇಕು. ಶಿಕ್ಷಣ ಸಂಸ್ಥೆಗಳಿಗೆ ಮೂಲ ಸೌಕರ್ಯ, ವಿದ್ಯಾರ್ಥಿಗಳಿಗೆ ಕ್ರೀಡಾ ಕ್ಷೇತ್ರದಲ್ಲಿ ಪ್ರೋತ್ಸಾಹ, ಕೃಷಿ ಆಧಾರಿತ ಕೈಗಾರಿಕೆಗಳು, ರೇಷ್ಮೆ ಅಭಿವೃದ್ದಿ ಪುನಶ್ಚೇತನ ಕಾರ್ಯಗಳಲ್ಲಿ ಪ್ರಗತಿ ಸಾಧಿಸಬೇಕಿದೆ ಎಂದರು.

ಶಾಸಕರಾದ ಡಾ.ಎನ್.ಟಿ.ಶ್ರೀನಿವಾಸ್, ಲತಾ ಮಲ್ಲಿಕಾರ್ಜುನ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಸದಸ್ಯರಾದ ಪ್ರೊ.ಡಾ.ಎಸ್.ಟಿ.ಬಾಗಲಕೋಟೆ, ಡಾ.ಸಂಗೀತಾ ಕಟ್ಟಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net