ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

Published on

ಹೊಸಪೇಟೆ: ತಾಲೂಕಿನ ವಿವಿಧ ಶಾಲಾ, ಕಾಲೇಜುಗಳಲ್ಲಿ ಈ ಸಾಲಿನಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಇಲಾಖೆಯ ವೆಬ್‌ಸೈಟ್ https://swdservices.karnataka.gov.in./prizemoneyclientApp/register ನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಮೆಟ್ರಿಕ್ ನಂತರದ ಪ್ರೋತ್ಸಾಹಧನಕ್ಕೆ ಮತ್ತು https://ssp.postmatric.karnataka.gov.in ನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net