ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ

01 MANJU 06
Published on

ಹೊಸಪೇಟೆ: ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ ತಮ್ಮ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಸರ್ಕಾರಿ ಪರವಾನಿಗಿ ಭೂ ಮಾಪಕರ ಸಂಘದ ಜಿಲ್ಲಾ ಘಟಕದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.

ಭೂಮಾಪಕರು ಸರ್ಕಾರ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಘೋಷಣೆ ಕೂಗಿದರು. ಎಲ್ಲ ಪರವಾನಗಿ ಭೂ ಮಾಪಕರು ಕಳೆದ ಇಪ್ಪತೈದು ವರ್ಷಗಳಿಂದ ಕಡಿಮೆ ವೇತನಕ್ಕೆ ದುಡಿಯುತ್ತಿದ್ದರೂ ಸಮಾನ ವೇತನ ಒದಗಿಸಿ ಸೇವೆ ಕಾಯಂಗೊಳಿಸದೆ ಸರ್ಕಾರ ತಮ್ಮ ಬೇಡಿಕೆಗಳನ್ನು ಕಡೆಗಣಿಸಿದೆ. ತಕರಾರು, ಕೋರ್ಟ್ ಆದೇಶ ಪ್ರಕರಣ, ಪೋಡಿಮುಕ್ತ, ಆಕಾರಬಂದ್, ಡಿಜಿಟೈಜೇಶನ್, ದರ್ಖಾಸ್ತು ಪೋಡಿ, ಸ್ವಮಿತ್ತ ಮತ್ತಿತರ ಪ್ರಕರಣಗಳನ್ನು ಒಳಗೊಂಡAತೆ ತಮಗೆ ಇದುವರೆಗೂ ಸಮಯಕ್ಕೆ ಸರಿಯಾಗಿ ಸರಿಯಾದ ವೇತನ ಆಗಿಲ್ಲ. ತಂತ್ರಾAಶದಲ್ಲಿ ವಿಲೇ ಪ್ರಕರಣಗಳಿಗೆ ಸಂಭಾವನೆಯಲ್ಲಿ ತಾರತಮ್ಯ ಮಾಡಲಾಗಿದೆ. ಲಾಗಿನ್ ಅಲ್ಲದೆ ಇತರೆ ಕೆಲಸಗಳನ್ನು ವಹಿಸಲಾಗಿದೆ. ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆಗ್ರಹಿಸಿದರು.

ಭೂ ಮಾಪಕರು ಅಳತೆಗೆ ಹೋದಾಗ ಆಗುವ ಅನಾಹುತ ಗಲಾಟೆ, ಕೋರ್ಟ್ ಪ್ರಕರಣ ಯಾವುದಕ್ಕೂ ನಮಗೆ ಭದ್ರತೆ ಇಲ್ಲ. ಪರವಾನಗಿ ಭೂಮಾಪಕರನ್ನು ವಿಶೇಷ ನೇಮಕಾತಿಯಡಿ ಸರ್ಕಾರಿ ಭೂ ಮಾಪಕರಾಗಿ ಕಾಯಂಗೊಳಿಸಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ತನಕ ಮುಷ್ಕರ ಮುಂದುವರಿಯಲಿದೆ ಎಂದು ಎಚ್ಚರಿಸಿದರು.

ಜಿಲ್ಲಾಧ್ಯಕ್ಷ ಮಹಾಲಿಂಗಪ್ಪ, ಕಂಬಿ ಗಿರೀಶ್, ರಾಘವೇಂದ್ರ, ಕೆ.ಮಂಜುನಾಥ, ರಾಜಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net