

ಹೊಸಪೇಟೆ: ಸರ್ಕಾರಿ ಸೌಲಭ್ಯಗಳು ಹಾಗೂ ಸಾರ್ವಜನಿಕ ಸೇವೆಗಳನ್ನು ಸಮರ್ಪಕವಾಗಿ ಪಡೆಯಲು ಮಾಹಿತಿ ಹಕ್ಕುನ್ನು ಸದ್ಭಳಕೆ ಮಾಡಿಕೊಳ್ಳಬೇಕಿದೆ ಎಂದು ಡಿಎಚ್‌ಒ ಡಾ.ಎಲ್.ಆರ್.ಶಂಕರ್ ನಾಯ್ಕ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ವಿಜಯ ವಿಠಲ ಸಭಾಂಗಣದಲ್ಲಿ ನಡೆದ ಮಾಹಿತಿ ಹಕ್ಕು ಕಾರ್ಯಗಾರ ಉದ್ಘಾಟಿಸಿ ಬುಧವಾರ ಮಾತನಾಡಿದರು,
ಆರ್‌ಟಿಐ ಕಾಯಿದೆಯನ್ನು ತಿಳಿಯುವ ನಿಟ್ಟಿನಲ್ಲಿ ಕಾರ್ಯಾಗಾರ ತುಂಬಾ ಉಪಯುಕ್ತವಾಗಿದೆ. ಬಹುತೇಕರು ಸರ್ಕಾರ ಕಚೇರಿಗಳ ಸೇವೆಗಳು, ಯೋಜನೆಗಳು ಹಾಗೂ ಅನೇಕ ಮಾಹಿತಿಗಳನ್ನು ಪ್ರಶ್ನಿಸುವ ಅನಿವಾರ್ಯತೆ ಇರುತ್ತದೆ. ಇಂತಹವರಿಗೆ ಮಾಹಿತಿ ಹಕ್ಕು ಹೇಗೆ ಬಳಸಬೇಕೆಂಬ ಮಾಹಿತಿ ಇರುವುದಿಲ್ಲ ಹಾಗಾಗೀ ಪ್ರತಿಯೊಬ್ಬರು ಮಾಹಿತಿ ಹಕ್ಕು ಕಾಯಿದೆಯ ಪರಿಚಯ, ವಿಧಾನಗಳನ್ನು ತಿಳಿಯಲು ಈ ಕಾರ್ಯಾಗಾರ ಅನುಕೂಲವಾಗಿದೆ ಎಂದರು.
ಮಾಹಿತಿ ಹಕ್ಕು ಸಂಪನ್ಮೂಲ ವ್ಯಕ್ತಿ ಹೊಳಗುಂದಿ ಎ.ಎಂ.ಪಿ.ವಾಗೇಶ, ಆರ್‌ಸಿಹೆಚ್ ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಭಾಸ್ಕರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ ಗೌಡ ಇತರರಿದ್ದರು.