ನಾಳೆ ಸಚಿವ ಜಮೀರ್ ಪ್ರವಾಸ

Published on

ಹೊಸಪೇಟೆ: ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್‌ಖಾನ್ ಆ.14ರಂದು ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಆ.14 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆವರೆಗೆ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆ ವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯುವ ಮೊದಲನೇಯ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ. ಸಂಜೆ 5 ರಿಂದ 6 ಗಂಟೆಯ ವರೆಗೆ ಜಿಲ್ಲೆಯ ಅತಿವೃಷ್ಟಿ/ ಅನಾವೃಷ್ಟಿಯ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಭಾಗವಹಿಸಲಿದ್ದಾರೆ. ಬಳಿಕ ಟಿ.ಬಿ.ಡ್ಯಾಮ್‌ನ ವೈಕುಂಠ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಧ್ವಜಾರೋಹಣ: ಆ.15 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಹೊಸಪೇಟೆ ತಾಲೂಕಿನ ಕೊಂಡನಾಯಕನಹಳ್ಳಿಯಲ್ಲಿ ಪಕ್ಷದಿಂದ ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಟಿ.ಬಿ.ಡ್ಯಾಮ್‌ನ ವೈಕುಂಠ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು. ಆ.16 ರಂದು ಬೆಳಿಗ್ಗೆ 9.30ಕ್ಕೆ ಬಳ್ಳಾರಿ ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರು ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net