

ಹೊಸಪೇಟೆ: ಕಲ್ಯಾಣ ಕರ್ನಾಟಕ ಉತ್ಸವವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಎಲ್ಲಾ ಅಧಿಕಾರಿಗಳು ಶ್ರಮಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಸೂಚನೆ ನೀಡಿದರು.
ಜಿಲ್ಲಾಧಿಕಾರಿಯ ತಮ್ಮ ಕಚೇರಿಯ ಶುಕ್ರವಾರ ಗೂಗಲ್ ಮೀಟ್ ಮೂಲಕ ಅಧಿಕಾರಿಗಳೊಂದಿಗೆ ಸಭೆಯ ಸಭೆ ನಡೆಸಿ ಮಾತನಾಡಿದರು.
ಸೆಪ್ಟೆಂಬರ್ 17ರಂದು ನಡೆಯುವ ಕಲ್ಯಾಣ ಕರ್ನಾಟಕ ಉತ್ಸವ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಧಿಕಾರಿಗಳು ತಮಗೆ ವಹಿಸಿದ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾರ್ಯಕ್ರಮದ ಆಹ್ವಾನ ಪತ್ರಿಕೆಗಳನ್ನು ಶಿಷ್ಟಾಚಾರದಂತೆ ಗಣ್ಯರಿಗೆ ವಿರಣೆಗೆ ಕ್ರಮ ವಹಿಸಿ. ಜಿಲ್ಲಾ ಕ್ರೀಡಾಂಗಣ, ಜಿಲ್ಲಾಡಳಿತ ಭವನ ಹಾಗೂ ನಗರದ ಪ್ರಮುಖ ವೃತ್ತಗಳಲ್ಲಿ ಸ್ವಚ್ಛತೆ ಮತ್ತು ವಿದ್ಯುತ್ ದೀಪಾಲಂಕಾರ ಮಾಡಲು ಕ್ರಮ ವಹಿಸಬೇಕು. ಪಂಥ ಸಂಚಲನದಲ್ಲಿ ಪಾಲ್ಗೊಳ್ಳುವ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕುಡಿವ ನೀರು, ಅಲ್ಪೋಪಹಾರ ವ್ಯವಸ್ಥೆಯನ್ನು ಮಾಡಬೇಕು. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲು ಎಲ್ಲರೂ ಸಹಕರಿಸಬೇಕು ಎಂದರು.