ಕನಕದಾಸರ ಜಯಂತಿ ಅರ್ಥಪೂರ್ಣವಾಗಿ ಆಚರಿಸಿ

27 MANJU 05
Published on

ಹೊಸಪೇಟೆ: ಕನಕದಾಸರ ಜಯಂತಿಯನ್ನು ನ.08 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ನಗರಸಭೆ ಸಹಯೋಗದಲ್ಲಿ ಸರಳವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕನಕದಾಸರ ಜಯಂತಿ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಸೋಮವಾರ ಮಾತನಾಡಿದರು.

ನಗರದಲ್ಲಿನ ಕನಕದಾಸರ ಪುತ್ಥಳಿಗೆ ಮಾಲಾರ್ಪಣೆ ಮತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನಕದಾಸರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು. ನಗರದಲ್ಲಿನ ಕನಕದಾಸ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ ಮತ್ತು ಗಾಂಧೀಜಿ ವೃತ್ತದಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಜಿಲ್ಲಾಡಳಿತ ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು. ಜಯಂತಿ ಕಾರ್ಯಕ್ರಮದಲ್ಲಿ ಕನಕದಾಸರ ಕುರಿತು ವಿಶೇಷ ಉಪನ್ಯಾಸ ನೀಡಲು ಉತ್ತಮ ವಾಗ್ಮಿಗಳನ್ನು ಆಹ್ವಾನಿಸಬೇಕು. ವಿಶೇಷವಾಗಿ ಕುರುಬ ಸಮುದಾಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸಿ ಸನ್ಮಾನಿಸಲು ಕ್ರಮ ವಹಿಸಬೇಕು ಎಂದರು.

ಜಿಪಂ ಸಿಇಒ ನೋಂಗ್ಜಾಯ್ ಮೋಹಮ್ಮದ್ ಅಕ್ರಮ್ ಅಲಿ ಷಾ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಎಎಸ್ಪಿ ಜಿ.ಮಂಜುನಾಥ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net