ಕನ್ನಡ ಭಾಷೆ ಬೆಳೆಸುವ ಕೆಲಸ ಮಾಡಿ

11 MANJU 04
Published on

ಹೊಸಪೇಟೆ: ಜಾತೀಯತೆ ಸಮಾಜಕ್ಕೆ ಅಂಟಿರುವ ದೊಡ್ಡ ರೋಗ. ನಾವು ಸಮಾಜದಲ್ಲಿ ಒಳ್ಳೆಯದನ್ನೇ ಮಾಡಬೇಕು ಎಂದು ಹಂಪಿ ಹೇಮಕೂಟ ಶೂನ್ಯ ಸಿಂಹಾಸನಾಧೀಶ್ವರ ಶ್ರೀ ಕೊಟ್ಟೂರು ಬಸವಲಿಂಗ ಸ್ವಾಮೀಜಿ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನಿಂದ ಬಿ.ಡಿ.ಸಿ.ಸಿ. ಬ್ಯಾಂಕ್ ಸಭಾಂಗಣದಲ್ಲಿ ಶನಿವಾರ ನಡೆದ ನೂತನ ಪದಾಧಿಕಾರಿಗಳ ಸೇವಾ ದೀಕ್ಷೆ ಮತ್ತು ಸನ್ಮಾನ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಆರ್ಶೀವಚನ ನೀಡಿದರು.

ಕನ್ನಡ ಭಾಷೆ ಅತ್ಯಂತ ಪುರಾತನ ಭಾಷೆಯಾಗಿದೆ. ಭಾಷೆ ಪ್ರೀತಿಸಬೇಕು. ಪ್ರೀತಿಸುವ ಭಾಷೆಯೇ ನಿಜವಾದ ಭಾಷೆ. ಭಾಷೆಯು ವ್ಯಕ್ತಿಯ ಸಂಸ್ಕಾರವನ್ನು ತೋರಿಸುತ್ತದೆ. ಸಾಹಿತ್ಯ ಎಲ್ಲರನ್ನೂ ಪ್ರೀತಿಸಬೇಕು. ಕನ್ನಡ ಸಂಘಟನೆಗಳು ಕನ್ನಡ ಭಾಷೆಯನ್ನು ಬೆಳೆಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು ಹೇಳಿದರು.

ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಬಿ.ಜಂಬಯ್ಯ ನಾಯಕ ಉದ್ಘಾಟಿಸಿದರು. ಕಸಾಪ ಜಿಲ್ಲಾಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ಅಧ್ಯಕ್ಷತೆ ವಹಿಸಿದರು. ಕನ್ನಡ ವಿವಿ ಪ್ರಾಧ್ಯಾಪಕ ಡಾ.ವೆಂಕಟಗಿರಿ ದಳವಾಯಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಶಂಕ್ರಿ, ಕಸಾಪ ನಿಕಟಪೂರ್ವ ತಾಲೂಕು ಅಧ್ಯಕ್ಷ ಡಾ.ನಾಯಕರ ಹುಲುಗಪ್ಪ, ಅಧ್ಯಕ್ಷ ಡಾ.ಗುಂಡಿ ಮಾರುತಿ, ಸಂಘಟನಾ ಕಾರ್ಯದರ್ಶಿ ಎಲ್.ಹಾಲ್ಯಾನಾಯ್ಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net