

ಹೊಸಪೇಟೆ: ನಗರದ ಬಳ್ಳಾರಿ ರಸ್ತೆಯ ಇಲ್ಲಿನ ಶ್ರೀಪುಣ್ಯಾನಂದಪುರಿ ಕಲ್ಯಾಣ ಮಂಟಪದಲ್ಲಿ ನ.24ರಂದು 3ನೇ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ ನಡೆಯಲಿದೆ ಎಂದು ರಾಜ್ಯ ಸಾಂಪ್ರದಾಯಿಕ ಶೋಟೊಕಾನ್ ಕರಾಟೆ ಅಕಾಡೆಮಿಯ ಕಟ್ಟೆಸ್ವಾಮಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿ, ಮುದ್ದೆಬಿಹಾಳದಲ್ಲಿ ಎರಡು ಬಾರಿ ರಾಜ್ಯಮಟ್ಟದ ಪಂದ್ಯಾವಳಿ ನಡೆಸಲಾಗಿದೆ. ಈಗ ನಗರದಲ್ಲಿ ನಡೆಸಲಾಗುತ್ತಿದೆ. ಈ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದವರು. ಡಿಸೆಂಬರ್‌ನಲ್ಲಿ ದಿಲ್ಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದಲ್ಲಿ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ. ಕಟಾ, ಕುಮಿತೆ ವಿಭಾಗಗಳಲ್ಲಿ ಪಂದ್ಯಾವಳಿ ನಡೆಯಲಿದ್ದು, 6 ರ‍್ಷದೊಳಗಿನವರಿಂದ 25 ರ‍್ಷದೊಳಗಿನವರು ಭಾಗವಹಿಸಲಿದ್ದಾರೆ. ಮಹಿಳಾ ಮತ್ತು ಪುರುಷ ಮತ್ತು ಬಾಲಕ, ಬಾಲಕಿಯರು ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಈ ಪಂದ್ಯಾವಳಿಯಲ್ಲಿ ರಾಜ್ಯ ವಿವಿಧ ಜಿಲ್ಲೆಗಳಿಂದ 800ಕ್ಕೂ ಅಧಿಕ ಆಟಗಾರರು ಭಾಗವಹಿಸಲಿದ್ದಾರೆ. ವಸತಿ ಹಾಗೂ ಊಟದ ವ್ಯವಸ್ಥೆ ಕೂಡ ಮಾಡಲಾಗಿದೆ. 9 ಅಂಗಣಗಳಲ್ಲಿ ಸ್ರ‍್ಧೆ ನಡೆಯಲಿದ್ದು, ತರ‍್ಪುಗಾರರು ಆಗಮಿಸಲಿದ್ದಾರೆ ಎಂದರು.