ಸಿಎಂ ಕೆಡಿಪಿ ಸಭೆಯಂತೆ ಕ್ರಮೈಗೊಳ್ಳಿ

24 MANJU 06
Published on

ಹೊಸಪೇಟೆ‌ : ಜಿಲ್ಲೆಯಲ್ಲಿ ಕಳೆದ ವರ್ಷ ಮತ್ತು ಹಾಗೂ ಈ ಸಾಲಿನ ಫಲಿತಾಂಶದಲ್ಲಿ ಇಳಿಕೆಯಾಗಿರುವುದನ್ನು ನಡೆದ ಸಭೆಯಲ್ಲಿ ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡ ಜುಲೈ ತಿಂಗಳಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಪ್ರಗತಿ ಪರಿಶೀಲಿಸಿದ ಬಳಿಕ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಮುಖ್ಯಮಂತ್ರಿಗಳು ನಡೆಸಿದ ಸಭೆಯಲ್ಲಿ ನೀರ್ಣಯಿಸಿದಂತೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಫಲಿತಾಂಶ ಸುಧಾರಣೆಯ ಜವಾಬ್ದಾರಿಯನ್ನು ಸರಿಯಾಗಿ ನಿಬಾಯಿಸಬೇಕು. ಮಾರಕವಾದ ಡೆಂಗೆ ಜ್ವರ ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗದಂತೆ ಮುಂಜಾಗ್ರತೆ ವಹಿಸಬೇಕು. ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು. ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಪ್ರತಿ ಮನೆಮನೆಗೆ ತೆರಳಿ ಜಾಗೃತಿ ಮೂಡಿಸಬೇಕು. ಎರಡು ವಾರಕ್ಕೊಮ್ಮೆ ಸಭೆ ನಡೆಸಿ ಪರಿಶೀಲನೆ ನಡೆಸಬೇಕು ಎಂದರು.
ಕಲುಷಿತ ನೀರು ಕುಡಿದು ಮಧುಗಿರಿಯಲ್ಲಿ ಸಾವಿಗೀಡಾದ ಪ್ರಕರಣ ಎಲ್ಲೂ ಮರುಕಳಿಸಬಾರದು. ಕಲುಷಿತ ನೀರು ಕುಡಿದು ಸಾವಿಗೀಡಾಗುವ ಪ್ರಕರಣಗಳು ದಾಖಲಾಗದಂತೆ ಸಾಕಷ್ಟು ಮುಂಜಾಗ್ರತೆ ವಹಿಸಬೇಕು. ಎಲ್ಲ ಕಡೆಗೆ ಶುಚಿತ್ವದ ಕಡೆಗೆ ಗಮನ ಹರಿಸಬೇಕು. ಎಲ್ಲಾ ತಹಸೀಲ್ದಾರ ಕಚೇರಿಗಳಲ್ಲಿ ಸರ್ಕಾರಿ ಭೂಮಿಯ ವಿವರ, ಅತಿಕ್ರಮಣವಾದ ಕೆರೆ ಮತ್ತು ಭೂಮಿ, ಎಷ್ಟು ವರ್ಷದಿಂದ ಅತೀಕ್ರಮಣವಾಗಿದೆ. ಕೋಡಿಗಳು, ನಾಲಾ, ಹಳ್ಳಗಳು, ನೀರಿನ ಪ್ರಮಾಣ, ಗೋಮಾಳ ಮಾಹಿತಿಯನ್ನು ಕಚೇರಿಗಳಲ್ಲಿ ಪ್ರದರ್ಶಿಸಲು ಎಲ್ಲ ತಹಸೀಲ್ದಾರರು ಕೂಡಲೇ ಕ್ರಮ ವಹಿಸಬೇಕು. ಜಿಲ್ಲೆಯ ಎಲ್ಲಾ ಕುಡಿಯುವ ನೀರಿನ ಮೂಲಗಳಿಗೆ ನೀರಿನ ಸಂಪರ್ಕ ವ್ಯವಸ್ತೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಬೇಕು. ಬಾಲ ಕಾರ್ಮಿಕರನ್ನು ರಕ್ಷಿಸಲು ಕಾರ್ಮಿಕ ಇಲಾಖೆಯಿಂದ ಕಾರ್ಯಕ್ರಮಗಳನ್ನು ರೂಪಿಸಬೇಕು. ಕುರಿಗಾಹಿಗಳು ಬಂದೂಕು ಲೈಸೆನ್ಸ್ ಕೋರಿದರೆ ನಿಯಮಾನುಸಾರ ಪರಿಶೀಲಿಸಿ ಲೈಸೆನ್ಸ್ ನೀಡಬೇಕು ಎಂದರು. ಇನ್ನೂ ವಿಷಯಗಳನ್ನು ಚರ್ಚಿಸಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.

.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net