

ಹೊಸಪೇಟೆ: ವಿಜಯನಗರ ಸಾಮ್ರಾಜ್ಯದ ಆಡಳಿತದಿಂದ ಪ್ರಭಾವಿತರಾಗಿದ್ದ ಶ್ರೀ ನಾಡಪ್ರಭು ಕೆಂಪೇಗೌಡರ ಆಡಳಿತವು ಇಂದಿಗೂ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು.
ಜಿಲ್ಲಾಡಳಿತ, ಜಿ.ಪಂ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯಿಂದ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು. ಕೆಂಪೇಗೌಡ ಅವರು ಕಾಲದಲ್ಲಿಯೇ ನೀರಿನ ಹಾಗೂ ಮಣ್ಣಿನ ಮಹತ್ವ ತಿಳಿದಿದ್ದರು. ವೈಜ್ಞಾನಿಕವಾಗಿ ಅನೇಕ ಕೆರೆ-ಕಟ್ಟೆಗಳನ್ನು ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ಕೊಡುಗೆ ನಮ್ಮ ನಾಡಿಗೆ ಅಪಾರವಾಗಿದೆ ಎಂದರು.
ಜಿ.ಪಂ. ಸಿಇಒ ಸದಾಶಿವ ಬಿ.ಪ್ರಭು ಮಾತನಾಡಿ, ನಾಡಪ್ರಭು ಕೆಂಪೇಗೌಡರು ಬೆಂಗಳೂರಿನ ನಿರ್ಮಾತೃ ಎನಿಸಿಕೊಂಡವರು. ನೀರಿನ ಮಹತ್ವ ಅರಿತು ದಾಖಲೆ ರೀತಿಯಲ್ಲಿ ಕೆರೆಗಳನ್ನು ನಿರ್ಮಿಸಿ ಸಾಧನೆ ತೋರಿದ್ದಾರೆ. ಅವರ ಆಡಳಿತ, ಸಾಧನೆ ನಮಗೆ ಸದಾಕಾಲ ಸ್ಫೂರ್ತಿದಾಯಕ. ಅವರು ಸಾಧಿಸಿದ ಕೆಲಸಗಳು ಇತರರಿಗೆ ಮಾದರಿಯಾಗಿವೆ ಎಂದರು.
ವಿಶ್ರಾAತ ಇತಿಹಾಸ ಪ್ರಾಧ್ಯಾಪಕ ಡಾ.ಎಚ್.ಎಂ.ಚAದ್ರಶೇಖರ ಶಾಸ್ತಿç ಉಪನ್ಯಾಸ ನೀಡಿದರು. ನಾಡಪ್ರಭು ಕೆಂಪೇಗೌಡರ ಜಯಂತಿ ನಿಮಿತ್ತ ವಿದ್ಯಾರ್ಥಿಗಳಗಿಎ ಪ್ರಬಂಧ ಸ್ಪರ್ಧೆಯಲ್ಲಿ ಆಯೋಜಿಸಲಾಗಿತ್ತು. ನಗರದ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಎಚ್.ಕೆ.ವಿದ್ಯಾಪ್ರಿಯಾ ಪ್ರಥಮ ಸ್ಥಾನ ಪಡೆದರು. ಚಾರಿಟೇಬಲ್ ಪ್ರೌಢಶಾಲೆಯ ವಂದನಾ ದ್ವೀತಿಯ ಸ್ಥಾನ ಪಡೆದರು. ಭಾಷಣ ಸ್ಪರ್ಧೆಯಲ್ಲಿ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಎಂ.ಶಾAಭವಿ ಪ್ರಥಮ, ನ್ಯಾಷನಲ್ ಪ್ರೌಢಶಾಲೆಯ ಗುಜ್ಜಲ್ ಹಂಸ ದ್ವೀತಿಯ ಸ್ಥಾನ ಪಡೆದರು. ವಿಜೇತರಿಗೆ ಸನ್ಮಾನಿಸಿ ಗೌರವಿಸಲಾಯಿತು.
ತಹಶೀಲ್ದಾರ ವಿಶ್ವಜಿತ್ ಮೆಹತಾ, ತಾ.ಪಂ. ಇಒ ಹರೀಶ್, ಸಿಡಿಪಿಒ ಸಿಂಧೂ ಯಲಿಗಾರ, ಸರ್ಕಾರಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ನಾಗರಾಜ ಹವಾಲ್ದಾರ ಇತರರಿದ್ದರು.