ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅ.23ಕ್ಕೆ

14 MANJU 01
Published on

ಹೊಸಪೇಟೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಅ.23 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳ ಆಚರಣೆಗೆ ಸಿದ್ಧತೆ ವಹಿಸಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಿತ್ತೂರು ರಾಣಿ ಚೆನ್ನಮ್ಮನವರು ಅಪ್ರತಿಮ ದೇಶಭಕ್ತೆ ಇವರ ಜಯಂತಿ ಆಚರಿಸಲಾಗುವುದು. ನಗರದ ಪುತ್ಥಳಿಗೆ ಮಾಲಾರ್ಪಣೆ ವೇಳೆ ಎಲ್ಲಾ ಸಮುದಾಯದ ಮುಖಂಡರು ಭಾಗವಹಿಸಲು ಕ್ರಮ ವಹಿಸಲಾಗುವುದು. ಎಲ್ಲಾರು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ. ಕೊಟ್ಟೂರು ಸಂಸ್ಥಾನ ಮಠದಲ್ಲಿ ನಡೆಯುವ ಕಾರ್ಯಕ್ರವನ್ನು ದಿನಾಂಕ ನಿಗಧಿಪಡಿಸಿ ಸಮುದಾಯದ ಸಹಭಾಗಿತ್ವದಲ್ಲಿ ಜಿಲ್ಲಾಡಳಿತ ಸಹಕಾರದೊಂದಿಗೆ ಅದ್ದೂರಿ ಆಚರಣೆಗೆ ಸಿದ್ಧತೆ ನಡೆಸಲಾಗುವುದು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ್, ಪ್ರಮುಖರಾದ ಗೊಗ್ಗ ಚನ್ನಬಸವರಾಜ, ಕಿಚಡಿ ಕೊಟ್ರೇಶ್, ಕೆ.ರವಿಶಂಕರ್, ಮಧುರ ಚನ್ನಶಾಸ್ತಿç ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net