ಹೊಸಪೇಟೆ: ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಸಹಯೋಗದಲ್ಲಿ ಜಿಲ್ಲೆಯ ವಲಸೆ ಕುರಿಗಾಹಿಗಳಿಗೆ ಗುರಿತಿನ ಚೀಟಿ ನೀಡಲು ಫಲಾನುಭವಿಗಳಿಂದ ಅರ್ಜಿ ಆಹ್ವಾನಿಲಾಗಿದೆ.
ಮೂಲ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಲ್ಲಿಸ ಬಹುದು. ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಪಶು ಆಸ್ಪತ್ರೆ ಆವರಣದಲ್ಲಿರುವ ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು. ದೂ.ಸಂ: 08394225129ಗೆ ಸಂಪರ್ಕಿಸಬಹುದು ಎಂದು ಹೊಸಪೇಟೆಯ ಕರ್ನಾಟಕ ಕುರಿ ಮತ್ತು ಹುಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.