

ಹೊಸಪೇಟೆ: ರಾಜ್ಯದಲ್ಲಿರುವ ವಿವಿಧ 91 ವರ್ಗಗಳ 35 ಲಕ್ಷ ಕಾರ್ಮಿಕರನ್ನು ಗುರುತಿಸಿ ವಿವಿಧ ಸೌಲಭ್ಯಗಳನ್ನೊಳಗೊಂಡ ಸ್ಮಾರ್ಟ್ ಕಾರ್ಡ್ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು.
ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆಯಿಂದ ನಗರದ ಖಾಸಗಿ ಹೊಟೇಲ್‌ನಲ್ಲಿ ಶುಕ್ರವಾರ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ವಿವಿಧ ಯೋಜನೆಗಳ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿನ ಆರಂಭಿಕವಾಗಿ 26 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲಾಗಿತ್ತು. ಹೊಸದಾಗಿ 91 ವರ್ಗಗಳ ಕಾರ್ಮಿಕರನ್ನು ಗುರುತಿಸಿ ಸೌಲಭ್ಯವನ್ನು ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯೋಜನೆಯಡಿಯಲ್ಲಿ ಅಪಘಾತ ಪರಿಹಾರ, ಆಸ್ಪತ್ರೆ ಚಿಕಿತ್ಸೆ ವೆಚ್ಚ, ಸಹಜ ಮರಣ, ಅಂತ್ಯಕ್ರಿಯೆ ವೆಚ್ಚ ಧನ ಸಹಾಯ ನೀಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯನವರಿಗೆ ರಾಜ್ಯ ಸರ್ಕಾರದ ಪೆಟ್ರೋಲ್ ಮತ್ತು ಡಿಸೇಲ್‌ನಿಂದ ರಾಜ್ಯಕ್ಕೆ ಬರುವ ತೆರಿಗೆ ಸಂಗ್ರಹದಲ್ಲಿ ಕನಿಷ್ಟ ಶೇ.1 ರಷ್ಟು ಹಣವನ್ನು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗೆ ನೀಡಬೇಕು ಎಂದು ಮನವಿ ಮಾಡಲಾಗಿದೆ. ಹಾಗೇನಾದರೂ ಒಪ್ಪಿಗೆ ನೀಡಿದರೇ 2200 ಕೋಟಿ ರೂ. ಸಂಗ್ರಹವಾಗಲಿದೆ ಅದನ್ನು ನೇರವಾಗಿ ಸ್ಮಾರ್ಟ್ ಕಾರ್ಡ್ ಫಲಾನುಭವಿಗಳಿಗೆ ನೀಡಲಾಗುವುದು. ರಾಜ್ಯ ಸರ್ಕಾರ ಅಡಳಿತಕ್ಕೆ ಬಂದ ಮೇಲೆ ಪಂಚ ಗ್ಯಾರಂಟಿಗಳ ಅನುಷ್ಠಾನದ ವಿರುದ್ದ ವಿಪಕ್ಷಗಳು ಟೀಕೆ ಮಾಡಿದ್ದರು. ಕೇವಲ ಎರಡು ತಿಂಗಳಲ್ಲೇ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ರಾಜ್ಯದ ಜನತೆಗೆ ವರ್ಷಕ್ಕೆ ನೇರವಾಗಿ 60 ಸಾವಿರ ಕೋಟಿ ರೂ. ಐದು ವರ್ಷಕ್ಕೆ 3 ಲಕ್ಷ ಕೋಟಿ ನೀಡುವ ದೇಶದ ಏಕೈಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಂಬುದನ್ನು ಹೆಮ್ಮೆಯಿದೆ. ಕೇಂದ್ರ ಸರ್ಕಾರ ಜಿಡಿಪಿಯ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆಯನ್ನು ಮೂಡಿಸುತ್ತಿದೆ. ಸುಮಾರು 23 ಪಿಎಸ್‌ಯು ಸಂಸ್ಥೆಗಳು ದಿವಾಳಿ ಆಗಿವೆ. ಬಿಎಸ್‌ಎನ್‌ಎಲ್ ಸಂಸ್ಥೆ ನೆಲಕಚ್ಚಿದೆ. ಜಿಯೋ ಉನ್ನತ ಸ್ಥಾನಕ್ಕೇರಿದೆ ಎಂದರು.
ಸಂಸದ ಈ.ತುಕಾರಾಂ, ಶಾಸಕರಾದ ಹೆಚ್.ಆರ್.ಗವಿಯಪ್ಪ, ಲತಾ ಮಲ್ಲಿಕಾರ್ಜುನ, ಡಾ.ಎನ್.ಟಿ.ಶ್ರೀನಿವಾಸ್, ನಗರಸಭೆ ಅಧ್ಯಕ್ಷ ರೂಪೇಶ್ ಕುಮಾರ್, ಉಪಾಧ್ಯಕ್ಷ ರಮೇಶ್, ಹುಡಾ ಅಧ್ಯಕ್ಷ ಎಚ್.ಎನ್.ಎಫ್.ಇಮಾಮ್ ನಿಯಾಜಿ, ಲಿಡ್ಕರ್ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಪಂ ಸಿಇಒ ನೊಂಗ್ಜಾಯ್ ಮೋಹಮ್ಮದ್ ಅಕ್ರಮ್ ಅಲಿ ಷಾ, ಎಸ್ಪಿ ಬಿ.ಎಲ್.ಶ್ರೀಹರಿಬಾಬು, ಕಾರ್ಮಿಕ ಆಯುಕ್ತ ಡಾ.ಎಚ್.ಎನ್.ಗೋಪಾಲಕೃಷ್ಣ, ಜಂಟಿ ಕಾರ್ಮಿಕ ಆಯುಕ್ತ ಡಾ.ಎಸ್.ಬಿ.ರವಿಕುಮಾರ್ ಇತರರಿದ್ದರು.
ಸಿಎಂ ಸಿದ್ದರಾಮಯ್ಯನವರು ಎರಡನೇ ದೇವರಾಜ್ ಅರಸು ಇದ್ದಂತೆ ರಾಜ್ಯದಲ್ಲಿ ನುಡಿದಂತೆ ನಡೆಯುತ್ತಿದ್ದಾರೆ. ಬಹುದಿನದಿಂದ ಅಮೆಗತಿಯಲ್ಲಿ ನಡೆಯುತ್ತಿದ್ದ ಬಳ್ಳಾರಿ ಹೊಸಪೇಟೆ ರಾಷ್ಟಿçÃಯ ಹೆದ್ದಾರಿ ರಸ್ತೆ ಕಾಮಗಾರಿಗೆ ವೇಗ ನೀಡಲಾಗಿದೆ. ಅಕ್ಟೋಬರ್ ಅಂತ್ಯದೊಳಗೆ ಉದ್ಘಾಟನೆ ಮಾಡಲಾಗುತ್ತದೆ ಎಂದು ಸಂಸದ ಈ.ತುಕಾರಾಂ ತಿಳಿಸಿದರು.