ಕಾರ್ಮಿಕರ ಕಲ್ಯಾಣ ಮಂಡಳಿ ರಚನೆಯ ವಿಜಯೋತ್ಸವ

news
ಹೊಸಪೇಟೆಯಲ್ಲಿ ಮಂಗಳವಾರ ಆಟೋ ಚಾಲಕರು ಸರ್ಕಾರಕ್ಕೆ ಸಲ್ಲಿಕೆ ಮಾಡುವ ಬೇಡಿಕೆ ಪತ್ರವನ್ನು ಪ್ರದರ್ಶನ ಮಾಡಿದರು.
Published on

ಹೊಸಪೇಟೆ: ಸಾರಿಗೆ ರಂಗದ ಕಾರ್ಮಿಕರ ಕಲ್ಯಾಣ ಮಂಡಳಿ ರಚನೆ ಮಾಡಿರುವ ಹಿನ್ನೆಲೆಯಲ್ಲಿ ಅಖಿಲ ಭಾರತ ರಸ್ತೆ ಸಾರಿಗೆ ಕಾರ್ಮಿಕರ ಒಕ್ಕೂಟದ ವಿಜಯನಗರ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ವಿಜಯೋತ್ಸವ ಆಚರಿಸಿದರು.

ಒಕ್ಕೂಟದ ತಾಲೂಕು ಅಧ್ಯಕ್ಷ ಕೆ.ಎಂ.ಸAತೋಷ್ ಮಾತನಾಡಿ, ನಿರಂತರ 28 ವರ್ಷಗಳ ಕಾಲ ಸಂಘಟನೆ ಹೋರಾಟಕ್ಕೆ ಇದೀಗ ಸರ್ಕಾರ ಸಾರಿಗೆ ಕಾರ್ಮಿಕರ ಕಲ್ಯಾಣ ಮಂಡಳಿ ರಚನೆ ಮಾಡಿದೆ. ಮಂಡಳಿ ಮೂಲಕ ಸಾರಿಗೆ ರಂಗದ ಕಾರ್ಮಿಕರಿಗೆ ಕನಿಷ್ಠ ಸಾವಿರ ಕೋಟಿ ರೂ. ಹಣ ನೀಡಬೇಕು. ಮತ್ತು ಸಾರಿಗೆ ಕ್ಷೇತ್ರದಲ್ಲಿ ಸಸ್ ರೂಪದಲ್ಲಿ ಸಂಗ್ರಹವಾಗುತ್ತಿರುವ ಹಣವನ್ನು ಕಾರ್ಮಿಕರ ಕಲ್ಯಾಣ ಯೋಜನೆಗೆ ಮೀಸಲಿಡಬೇಕು ಎಂದು ಆಗ್ರಹಿಸಿದರು.

ಸಾರಿಗೆ ರಂಗದ ಕಾರ್ಮಿಕರಿಗೆ ಪ್ರತ್ಯೇಕ ಕಲ್ಯಾಣ ಮಂಡಳಿ ರಚನೆ ಮಾಡಬೇಕು ಎಂದು ಆಗ್ರಹಿಸಿ, ಖಾಸಗಿ ವಾಣಿಜ್ಯ ವಾಹನ ಚಾಲಕರನ್ನು ಒಗ್ಗೂಡಿಸಿ ಅಖಿಲ ಭಾರತ ರಸ್ತೆ ಸಾರಿಗೆ ಕಾರ್ಮಿಕರ ಒಕ್ಕೂಟದ ರಾಜ್ಯ ಸಂಚಲನ ಸಮಿತಿ ಮೂಲಕ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಎರಡು ಬಾರಿ ರಾಜ್ಯ ಸಮಾವೇಶಗಳನ್ನು ನಡೆಸಲಾಯಿತು. ನಿರಂತರ ಹೋರಾಟದ ಪರಿಶ್ರಮದಿಂದ ರಾಜ್ಯದಲ್ಲಿ ಮೋಟರ್ ಸಾರಿಗೆ ಮತ್ತು ಇತರೆ ಸಂಬAಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಅಧಿನಿಯಮ 2024ನ್ನು ರಾಜ್ಯ ಸರ್ಕಾರ ಸಾರಿಗೆ ರಂಗದ ಕಾರ್ಮಿಕರ ಕಲ್ಯಾಣ ಮಂಡಳಿ ರಚನೆ ಮಾಡಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net