

ಹೊಸಪೇಟೆ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ, ಆರೋಗ್ಯ ಇಲಾಖೆ, ವಾರ್ತಾ ಮತ್ತು ಸಾರ್ವನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ಸೆ.01ರಂದು ಸಂಜೆ 6 ಗಂಟೆಗೆ ನಗರದ ಕೆ.ಎಸ್.ಆರ್.ಟಿ.ಸಿ. ಘಟಕದಲ್ಲಿ ಚಾಲಕರಿಗೆ ಮತ್ತು ನಿರ್ವಾಹಕರಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಮಾನ ಎ.ನಂದಗಡಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿಭಾಗೀಯ ನಿಯಂತ್ರಣಾಧಿಕಾರಿ ತಿಮ್ಮಾರೆಡ್ಡಿ ಹೀರಾ ಅಧ್ಯಕ್ಷತೆ ವಹಿಸಲಿದ್ದಾರೆ.