ಕಾನೂನನ್ನು ಅರಿತು ಪಾಲನೆ ಮಾಡಿ

news
ಹೊಸಪೇಟೆಯಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ಮಂಗಳವಾರ ನಡೆಯಿತು.
Published on

ಹೊಸಪೇಟೆ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಇತರೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಖಾಸಗಿ ಶಾಲೆಯಲ್ಲಿ ಬಾಲ್ಯ ವಿವಾಹ ನಿಷೇಧ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆ-2012ರ ಕಾನೂನು ಅರಿವು ನೆರವು ಕಾರ್ಯಕ್ರಮ ಮಂಗಳವಾರ ನಡೆಯಿತು.

ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷೆ ಹೇಮಲತಾ ಬಿ.ಹುಲ್ಲೂರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ಭಾರತೀಯ ಕಾನೂನನ್ನು ಅರಿತು ಪಾಲಿಸಬೇಕು. ನಮ್ಮ ಸಂವಿಧಾನ ಒದಗಿಸಿರುವ ಹಕ್ಕುಗಳಿಗೆ ಚ್ಯುತಿ ಬಂದರೆ ಸುಮ್ಮನೆ ಕೂರದೆ ಕಾನೂನಿನ ಸಹಾಯ ಪಡೆದುಕೊಳ್ಳಬೇಕು. ಕಾನೂನುಗಳು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತವೆ ಎಂದರು.

ಬಾಲ್ಯ ವಿವಾಹ ನಿಷೇಧ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆ ಅರಿಯಬೇಕು. ಹದಿಹರೆಯದವರಲ್ಲಿ ಆಕರ್ಷಣೆ ಸಹಜ. ತಂದೆ ತಾಯಿಯ ಗೌರವವನ್ನು ನೆನೆದು ಶ್ರದ್ಧೆಯಿಂದ ಓದುವ ಹವ್ಯಾಸ ಬೆಳೆಸಿಕೊಳ್ಳಿ ಎಂದರು.

ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಪ್ರಶಾಂತ್ ನಾಗಲಾಪುರ್ ಮಾತನಾಡಿ, ಹೈಕೋರ್ಟ್ ನಿರ್ದೇಶನದಂತೆ ಕಾನೂನು ಸೇವಾ ಸಮಿತಿ ರೂಪಿಸಿ ಸಾರ್ವಜನಿಕರಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಮಕ್ಕಳು ಈ ಕಾನೂನುಗಳ ಬಗ್ಗೆ ಕಲಿತು ಸಾರ್ವಜನಿಕರಿಗೂ ಜಾಗೃತಿ ಮೂಡಿಸಲು ಪ್ರಯತ್ನಿಸಬೇಕು ಎಂದರು.

ನ್ಯಾಯಾಧೀಶರಾದ ಹೇಮಲತಾ ಬಿ.ಹುಲ್ಲೂರ, ಅಶೋಕ ಆರ್.ಎಚ್., ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಶ್ರೀನಿವಾಸಮೂರ್ತಿ, ಕಾನೂನು ಪರಿವೀಕ್ಷಣಾಧಿಕಾರಿ ಶ್ರೀಕಾಂತ್, ವಕೀಲೆ ಶ್ವೇತಾಂಬರಿ, ಶಾಲೆ ಮುಖ್ಯ ಶಿಕ್ಷಕ ಕೆ.ಬಿ.ಲಿಂಗಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net