

ಹೊಸಪೇಟೆ: ಸೀಳು ತುಟಿ ಮತ್ತು ಅಂಗುಳ ಮತ್ತು ಇತರ ಮುಖದ ವಿರೂಪ ಶಸ್ತ್ರಚಿಕಿತ್ಸೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗುತ್ತಿರುವುದು ಬಡವರ್ಗದ ಜನರಿಗೆ ತುಂಬಾ ಅನುಕೂಲವಾಗಿದೆ ಎಂದು ಡಿಎಚ್‌ಒ ಡಾ.ಶಂಕರ ನಾಯ್ಕ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಇಂಗಾ ಫೌಂಡೇಶನ್ ಸಹಯೋಗದಲ್ಲಿ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಶುಕ್ರವಾರ ಏರ್ಪಡಿಸಿದ್ದ ಸೀಳು ತುಟಿ, ಸೀಳು ಅಂಗುಳ ಮತ್ತು ಮುಖದ ವಿರೂಪಗಳು ಕುರಿತು ಉಚಿತ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಸೇವೆಗಳ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಜಿಲ್ಲಾ ಆಸ್ಪತ್ರೆಗಳಲ್ಲಿ ಸೀಳು ತುಟಿ, ಸೀಳು ಅಂಗುಳ ಮತ್ತು ಮುಖದ ವಿರೂಪಗಳ ಶಸ್ತ್ರ ಚಿಕಿತ್ಸೆಗಳ ಸೇವೆಗಳು ಉಚಿತವಾಗಿ ನೀಡಆಗುತ್ತಿದೆ. ಭ್ರೂಣದ ಬೆಳವಣಿಗೆಯ ಸಮಯದಲ್ಲಿ ಮೇಲಿನ ತುಟಿ ಮತ್ತು ಬಾಯಿಯ ಮೇಲ್ಭಾಗದ ಅಂಗಾAಶಗಳು ಸರಿಯಾಗಿ ಒಟ್ಟಿಗೆ ಸೇರದಿದ್ದಾಗ ಸೀಳು ತುಟಿ ಮತ್ತು ಸೀಳು ಅಂಗುಳಗಳು ಸಂಭವಿಸುತ್ತವೆ. ಶಸ್ತ್ರಚಿಕಿತ್ಸೆಯು ಸೀಳು ತುಟಿ ಅಥವಾ ಸೀಳು ಅಂಗುಳನ್ನು ಸರಿಪಡಿಸಬಹುದು ಎಂದರು.
ಆರ್‌ಸಿಹೆಚ್ ಅಧಿಕಾರಿ ಡಾ.ಜಂಬಯ್ಯ ಮಾತನಾಡಿ, ಜಿಲ್ಲೆಯಲ್ಲಿ ಸತತವಾಗಿ ಹತ್ತು ವರ್ಷಗಳಲ್ಲಿ ನೂರಕ್ಕೂ ಹೆಚ್ಚು ಮುಖದ ವಿರೂಪಗಳು ಮತ್ತು ಸೀಳು ತುಟಿ, ಸೀಳು ಅಂಗುಳದ ಶಸ್ತ್ರ ಚಿಕಿತ್ಸೆಯನ್ನು ನೀಡಲಾಗಿದೆ. ಕಳೆದ ವರ್ಷ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಅಡಿಯಲ್ಲಿ 43 ಮುಖದ ವಿರೂಪಗಳು ಮತ್ತು 25 ಸೀಳು ತುಟಿ, ಸೀಳು ಅಂಗುಳಗಳ ಉಚಿತ ಶಸ್ತ್ರ ಚಿಕಿತ್ಸೆಗಳನ್ನು ನಡೆಸಲಾಗಿದೆ. ಫಲಾನುಭವಿಗಳು ಇದರ ಸಂಪೂರ್ಣ ಸದುಪಯೋಗವನ್ನು ಪಡೆದುಕೊಂಡಿದ್ದಾರೆ ಎಂದರು.
ಇಂಗಾ ಫೌಂಡೇಶನ್ ಅಧ್ಯಕ್ಷ ಆಡಿ ಚೇತನ ಇತರರಿದ್ದರು.