ಲೋಕಾಯುಕ್ತ ಹೆಸರು ದುರ್ಬಳಕೆ ದೂರು ದಾಖಲು

Published on

ಹೊಸಪೇಟೆ: ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಹೆಸರು ಮತ್ತು ಲೋಗೋವನ್ನು ದುರ್ಬಳಕೆ ಮಾಡಿಕೊಂಡಿರುವ ನಗರದ ಸಾಮಾಜಿಕ ಕಾರ್ಯಕರ್ತ ಕೆ.ಬಿ.ಹಿರೇಮಠ ವಿರುದ್ಧ ಚಿತ್ತವಾಡಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಸಾರ್ವಜನಿಕರಿಗೆ ಹಣಕಾಸಿನ ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿ ಕೆ.ಬಿ.ಹಿರೇಮಠ ಎಂಬುವವರು ನಮ್ಮೋರು ಸುದ್ದಿ ಎಂಬ ಪೇಜ್‌ನಲ್ಲಿ ಲೋಕಾಯುಕ್ತ ಕಚೇರಿಯನ್ನು ದುರ್ಬಳಕೆ ಮಾಡಿಕೊಂಡಿದ್ದ ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ದೂರು ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net