

ಹೊಸಪೇಟೆ: ಸಾರ್ವಜನಿಕ ಆಡಳಿತಕ್ಕೆ ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಹಾಗೂ ನಾಲ್ಕು ಅಂಗದAತಿರುವ ಪತ್ರಿಕಾರಂಗದಲ್ಲಿ ವಕೀಲರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಉಪ ಲೋಕಾಯುಕ್ತ ಬಿ.ವೀರಪ್ಪ ಹೇಳಿದರು.
ನಗರದ ಜಿಲ್ಲಾ ವಕೀಲರ ಸಂಘದ ಸಭಾಂಗಣದಲ್ಲಿ ಶನಿವಾರ ವಕೀಲರಿಗೆ ಆಯೋಜಿಸಿದ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅನ್ಯಾಯಕ್ಕೊಳಗಾದ ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿ ಅದರ ತೃಪ್ತಿಯೇ ಬೇರೆ ಇರುತ್ತದೆ. ನ್ಯಾಯ ಪಡೆದ ಕುಟುಂಬ ನಮ್ಮನ್ನು ದೇವರಂತೆ ಕಾಣುತ್ತಾರೆ. ಹಾಗಾಗೀ ಯುವಜನತೆ ವಕಾಲತ್ತು ಮಾಡಲು ಹೆಚ್ಚಿನ ಆಸಕ್ತಿ ವಹಿಸಬೇಕಿದೆ. ಎಲ್‌ಎಲ್‌ಬಿ ಮುಗಿಸಿದ ವಕೀಲರು ನ್ಯಾಯಾಂಗದ ಸೈನಿಕರಿದ್ದಂತೆ. ಸೈನ್ಯಕ್ಕೆ ಬಲ ಬೇಕಾದರೆ ಎಲ್ಲರೂ ವಕಾಲತ್ತು ಮಾಡುವುದಕ್ಕೆ ಆಸಕ್ತಿ ವಹಿಸಬೇಕಿದೆ ಎಂದರು.
ಶಾಸಕಾAಗ, ಕಾರ್ಯಾಂಗದ ವೈಖರಿಗೆ ಜನರ ಅಸಮಾಧಾನವಿದೆ. ಪತ್ರಿಕಾರಂಗ ನಿರ್ಧಾಕ್ಷಿಣ್ಯವಾಗಿ ವರದಿ ಮಾಡುವುದನ್ನು ಮರೆತಿದ್ದಾರೆ. ಕಾನೂನಿನ ಅರಿವಿಲ್ಲದ ವಿದ್ಯಾವಂತರು ಸಮಾಜಕ್ಕೆ ಮಾರಕವಾಗಿದ್ದಾರೆ. ನ್ಯಾಯಾಂಗದಿAದ ಜನರ ಸಂಕಷ್ಟಗಳಿಗೆ ನ್ಯಾಯ ಸಿಗಬೇಕಾದರೇ ಗ್ರಾಮೀಣ ಜನರಿಗೆ ಕಾನೂನಿನ ಅರಿವು ಮೂಡಿಸುವಲ್ಲಿ ವಕೀಲರು ಶ್ರಮಿಸಬೇಕಿದೆ. ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚೆಚ್ಚು ಕಾನೂನು ಅರಿವು, ನೆರವು ಕಾರ್ಯಕ್ರಮಗಳನ್ನು ಮಾಡಿ ಕಾನೂನು ಜ್ಞಾನವನ್ನು ಹೆಚ್ಚಿಸಬೇಕಿದೆ ಎಂದರು.
ಭ್ರಷ್ಟಾಚಾರ ಹೋಗಬೇಕು ಎಂದರೆ ವಕೀಲರು ಹಾಗೂ ಪತ್ರಕರ್ತರಿಂದ ಸಾಧ್ಯ. ಪತ್ರಕರ್ತರು ನಿರ್ದಾಕ್ಷಿಣ್ಯವಾಗಿ ಬರೆಯಬೇಕು. ವಕೀಲರು ನ್ಯಾಯಾಕ್ಕಾಗಿ ವಾದ ಮಾಡಬೇಕು. ಹದಗೆಟ್ಟ ಸಮಾಜದಲ್ಲಿ ಭ್ರಷ್ಟಾಚಾರ ತೋಲಗಿಸುವ ಸಂಕಲ್ಪ ಮಾಡಿರುವೆ ಕೈ ಜೋಡಿಸಿ, ಅದುವೆ ನನಗೆ ಸನ್ಮಾನ ಎಂದರು.
ನ್ಯಾಯಾಧೀಶರಾದ ಅಬ್ದುಲ್ ರೆಹಮಾನ್.ಎ.ನಂದಗಡಿ, ಲೋಕಾಯುಕ್ತ ಅಪರ ನಿಬಂಧಕರು ನ್ಯಾಯಮೂರ್ತಿಗಳಾದ ಕೆ.ಎಂ.ರಾಜಶೇಖರ್, ಪೃಥ್ವಿರಾಜ್ ವರ್ಣೇಕರ್, ಅರವಿಂದ್, ರಾಜೇಶ್ ಹೊಸಮನಿ, ವಕೀಲರ ಸಂಘದ ಅಧ್ಯಕ್ಷ ಕೆ.ಪ್ರಹ್ಲಾದ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಮೂರ್ತಿ, ಬಳ್ಳಾರಿ ಲೋಕಾಯುಕ್ತ ಎಸ್ಪಿ ಸಿದ್ದರಾಜು, ನ್ಯಾಯಾಧೀಶರಾದ ರಮೇಶ್ ಬಾಬು, ಹೇಮಾಲತಾ ಹುಲ್ಲೂರು, ಪ್ರಶಾಂತ್ ನಾಗಲಾಪುರ, ಅಶೋಕ್.ಆರ್, ಸಂಜೀವ ಕುಮಾರ್ ಇತರರಿದ್ದರು.