ಮಲೇರಿಯಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ

25 MANJU 03
Published on

ಹೊಸಪೇಟೆ: ವಿಶ್ವ ಮಲೇರಿಯಾ ದಿನಾಚರಣೆ ನಿಮಿತ್ತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಗರದಲ್ಲಿ ಶುಕ್ರವಾರ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಡಿಎಚ್‌ಒ ಕಚೇರಿಯಿಂದ ಆರಂಭವಾದ ಜಾಥಾ ನಗರಸಭೆ, ಡಾ.ಪುನೀತ್ ರಾಜಕುಮಾರ್ ವೃತ್ತದ, ತಹಸೀಲ್ ಕಚೇರಿ, ಕೋಟ್ ಮಾರ್ಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತಕ್ಕೆ ತಲುಪಿತು. ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ, ಜತೆಗೂಡಿ ಮುನ್ನಡೆಯೋಣ ಮಲೇರಿಯಾ ನಿವಾರಣೆ ಮಾಡೋಣ, ಶೂನ್ಯ ಮಲೇರಿಯಾ ಗುರಿ ತಲುಪೋಣ ಎಂಬ ನಾಮಫಲಕ ಹಿಡಿದು ಸಾಗಿದರು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಜಿಲ್ಲಾ ಅರ್.ಸಿ.ಎಚ್. ಅಧಿಕಾರಿ ಡಾ.ಜಂಬಯ್ಯ ನಾಯಕ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ‘ಮಲೇರಿಯಾ ರೋಗ ಲಕ್ಷಣ ಕಂಡು ಬಂದ ಕೂಡಲೇ ಸೂಕ್ತ ಚಿಕಿತ್ಸೆ ಪಡೆದರೆ ಬೇಗ ಗುಣಮುಖರಾಗಬಹುದು. ಚಳಿ– ನಡುಕ, ಜ್ವರ ಮಲೇರಿಯಾ ರೋಗದ ಪ್ರಮುಖ ಲಕ್ಷಣಗಳು’ ಎಂದು ಹೇಳಿದರು.

ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಮಲೇರಿಯಾ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೊಳ್ಳೆ ಪರದೆ ಬಳಸಬೇಕು ಎಂದರು.

ಎನ್.ವಿ.ಬಿ.ಡಿ.ಸಿ.ಪಿ ಡಾ.ಸತೀಶ್, ಟಿಎಚ್‌ಒ ಬಸವರಾಜ, ಜಿಲ್ಲಾ ಅರೋಗ್ಯ ಶಿಕ್ಷಣಾಧಿಕಾರಿ ಎಂ.ದೊಡಮನಿ, ಜಿಲ್ಲಾ ಅರೋಗ್ಯ ನಿರೀಕ್ಷಣಾಧಿಕಾರಿ ಎಂ.ಧರ್ಮನಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net